Sunday, 15th December 2024

AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ 81ನೇ ಹುಟ್ಟುಹಬ್ಬ

mallikarjun kharge

ವದೆಹಲಿ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ಅವರ 81ನೇ ಹುಟ್ಟುಹಬ್ಬ. ಈ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕಾಂಗ್ರೆಸ್ ನಾಯಕರು ಶುಭಾಶಯ ಕೋರಿದ್ದಾರೆ.

“ಶ್ರೀ ಮಲ್ಲಿಕಾರ್ಜುನ ಖರ್ಗೆ ಜಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಆಶೀರ್ವದಿಸಲಿ” ಎಂದು ಮೋದಿ ಟ್ವೀಟ್ ಮಾಡಿ ದ್ದಾರೆ. ಅವರ ಹಾರೈಕೆಗೆ ಕಾಂಗ್ರೆಸ್ ನಾಯಕರು ಧನ್ಯವಾದ ಅರ್ಪಿಸಿದರು.

ಖರ್ಗೆ ಅವರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, “ನಿಮ್ಮ ಕಠಿಣ ಪರಿಶ್ರಮ ಮತ್ತು ಬದ್ಧತೆ ನಮಗೆಲ್ಲರಿಗೂ ಸ್ಫೂರ್ತಿ ಯಾಗಿದೆ. ನಿಮಗೆ ಹೆಚ್ಚಿನ ಪ್ರೀತಿ ಮತ್ತು ಉತ್ತಮ ಆರೋಗ್ಯವನ್ನು ಬಯಸುತ್ತೇನೆ” ಎಂದು ಹೇಳಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಅವರಿಗೆ ಉತ್ತಮ ಆರೋಗ್ಯ ಮತ್ತು ಸಂತೋಷವನ್ನು ಹಾರೈಸಿದ್ದಾರೆ.