Tuesday, 3rd December 2024

ರಾಷ್ಟ್ರದ ಏಕತೆಗಾಗಿ ರಾಹುಲ್ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ….ಹೇಳಿಕೆಗೆ ಖರ್ಗೆ ಕ್ಷಮೆಯಾಚನೆ

ಜೈಪುರ: ರಾಜಸ್ಥಾನದ ಅನುಪಗಢದಲ್ಲಿ ಚುನಾವಣಾ ರಾಲಿಯನ್ನುದ್ದೇಶಿಸಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ರಾಹುಲ್ ಗಾಂಧಿ ಯಂತಹ ನಾಯಕರು ಈ ರಾಷ್ಟ್ರದ ಏಕತೆಗಾಗಿ ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ’ ಎಂದು ತಪ್ಪಿ ಹೇಳಿಕೆ ನೀಡಿದ್ದಾರೆ.

ಈ ವೇಳೆ ವೇದಿಕೆ ಮೇಲಿದ್ದ ನಾಯಕರೊಬ್ಬರು ಕೂಡಲೇ ಖರ್ಗೆ ಅವರ ಗಮನಕ್ಕೆ ತಂದಿದ್ದಾರೆ.

ವೇದಿಕೆಯಲ್ಲೇ ಕ್ಷಮೆಯಾಚಿಸಿದ ಖರ್ಗೆ. ನಾನು ರಾಹುಲ್ ಗಾಂಧಿ… ರಾಜೀವ್ ಗಾಂಧಿ ಅವರು ರಾಷ್ಟ್ರದ ಐಕ್ಯತೆಗಾಗಿ ತಮ್ಮ ಪ್ರಾಣವನ್ನು ನೀಡಿದ್ದಾರೆ ಎಂದು ನಾನು ತಪ್ಪಾಗಿ ಹೇಳಿದ್ದೇನೆ. ಕಾಂಗ್ರೆಸ್‌ನಲ್ಲಿ ದೇಶಕ್ಕಾಗಿ ಪ್ರಾಣ ನೀಡಿದ ನಾಯಕರಿದ್ದಾರೆ ಮತ್ತು ಬಿಜೆಪಿಯಲ್ಲಿ ಜೀವ ತೆಗೆಯುವ ನಾಯಕರಿದ್ದಾರೆ’ ಎಂದು ಹೇಳಿದರು.

ಖರ್ಗೆ ಅವರ ಈ ಹೇಳಿಕೆ ಬಿಜೆಪಿ ನಾಯಕರಿಗೆ ಬಂಡವಾಳವಾಗಿ ಬಳಸಿಕೊಂಡಿದ್ದಾರೆ ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ತುಣುಕನ್ನು ಶೇರ್ ಮಾಡಿದ್ದಾರೆ.

200 ಸದಸ್ಯ ಬಲದ ರಾಜಸ್ಥಾನ ವಿಧಾನಸಭೆಗೆ ನ.25 ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.