Friday, 13th December 2024

Mamata Banerjee: ನಿಮ್ಮಿಂದ ಪ್ರತಿಕ್ರಿಯೆ ಬರ್ತಿಲ್ಲ.. ಪ್ರಧಾನಿ ಮೋದಿಗೆ ಮತ್ತೆ ಪತ್ರ ಬರೆದ ದೀದಿ

mamata banerjee

ಕೋಲ್ಕತ್ತಾ: ಕೋಲ್ಕತ್ತಾದ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ(Kolkata Doctor Murder Case)ಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ(West Bengal CM) ಮಮತಾ ಬ್ಯಾನರ್ಜಿ(Mamata Banerjee) ಮತ್ತೆ ಪ್ರಧಾನಿ ನರೇಂದ್ರ ಮೋದಿ(PM Narendra Modi) ಅವರಿಗೆ ಪತ್ರ ಬರೆದಿದ್ದು, ಕೊಲೆ ಅತ್ಯಾಚಾರದಂತಹ ಹೀನ ಕೃತ್ಯದ ವಿರುದ್ಧ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವಂತೆ ಮನವಿ ಮನವಿ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆಯಷ್ಟೇ ನಾನು ಅತ್ಯಾಚಾರ ಪ್ರಕರಣಗಳ ವಿರುದ್ಧ ಕೇಂದ್ರ ಕಾನೂನಿನ ಅಗತ್ಯತೆ ಬಗ್ಗೆ ಕೋರಿ ನಿಮಗೆ ಪತ್ರ ಬರೆದಿದ್ದೆ. ಆದರೆ ನಿಮಮಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ದಯಮಾಡಿ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ರ ಕ್ರಮ ಜರುಗಿಸುವಂತೆ ಮನವಿ ಮಾಡುತ್ತಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಮ್ಮ ಎರಡನೇ ಪತ್ರದಲ್ಲಿ ತಿಳಿಸಿದ್ದಾರೆ. ಇನ್ನು ಈ ಬಗ್ಗೆ ಅವರು ಟ್ವೀಟ್‌ನಲ್ಲಿ ಪೋಸ್ಟ್‌ವೊಂದನ್ನೂ ಮಾಡಿದ್ದಾರೆ.

https://x.com/MamataOfficial/status/1829421295802401094

ಆ.22ರಂದು ಮಮತಾ ಬ್ಯಾನರ್ಜಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದರು.  ದಿನೇ ದಿನೇ ದೇಶಾದ್ಯಂತ ಹೆಚ್ಚಾಗುತ್ತಿರುವ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳ ಬಗ್ಗೆ ನಿಮ್ಮ ಗಮನಕ್ಕೆ ತರಲು ನಾನು ಬಯಸುತ್ತೇನೆ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಬೇಕೆಂದರೆ ಕಟ್ಟುನಿಟ್ಟಿನ ಕಾನೂನು ಜಾರಿಯಾದರೆ ಮಾತ್ರ ಸಾಧ್ಯ ಎಂದು ಪತ್ರದಲ್ಲಿ ತಿಳಿಸಿದ್ದರು.

ಏನಿದು ಘಟನೆ?

ಪಶ್ಚಿಮ ಬಂಗಾಳದ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಆಗಸ್ಟ್‌ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್‌ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್‌ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್‌ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ. ಇನ್ನು ವೈದ್ಯೆ ಕೊಲೆ ಪ್ರಕರಣದ ತನಿಖೆ ನಡೆಸಲು ಸುಪ್ರೀಂಕೋರ್ಟ್‌ ರಾಷ್ಟ್ರೀಯ ಕಾರ್ಯಪಡೆಯನ್ನು ನೇಮಕ ಮಾಡಿದೆ. ಈ ಕಾರ್ಯಪಡೆಯಲ್ಲಿ ಸರ್ಜನ್‌ ವೈಸ್‌ ಅಡ್ಮಿರಲ್‌ ಆರ್‌.ಕೆ. ಸರಿನ್‌, ಏಷ್ಯನ್ ಇನ್ಸ್ಟಿಟ್ಯೂಟ್ ಆಫ್ ನ್ಯಾಷನಲ್ ಗ್ಯಾಸ್ಟ್ರೋಲಜಿ ವ್ಯವಸ್ಥಾಪಕ ನಿರ್ದೇಶಕ ಡಾ. ನಾಗೇಶ್ವರ ರೆಡ್ಡಿ ಇದ್ದಾರೆ.

https://youtu.be/_ynq6xTKYTQ?si=FZfAFHRjvaT2Lk2Z