ಕೋಲ್ಕತ್ತಾ: ಸೆ.30 ರಂದು ಪಶ್ಚಿಮ ಬಂಗಾಳದಲ್ಲಿ ಉಪಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿಗಳು ಪ್ರಚಾರದ ಅಖಾಡಕ್ಕಿ ಳಿದಿದ್ದಾರೆ. ಸಿಎಂ ಮಮತಾ ಬ್ಯಾನರ್ಜಿ ಇಂದಿನಿಂದ ಪ್ರಚಾರದ ಕಣಕ್ಕಿಳಿದಿದ್ದು, ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ.
ಸೆ.30 ರಂದು ಪಶ್ಚಿಮ ಬಂಗಾಳದ ಭವಾನಿಪುರ, ಜಂಗೀಪುರ ಮತ್ತು ಸಂಸರ್ ಗಾಂಜ್ ಸ್ಥಾನಗಳಿಗೆ ಉಪಚುನಾವಣೆ ನಿಗದಿಯಾಗಿದೆ. ಈ ಹಿನ್ನೆಲೆಯಲ್ಲಿ ಭವಾನಿಪುರ ಕ್ಷೇತ್ರದಿಂದ ಅಖಾಡಕ್ಕಿಳಿಯುತ್ತಿರುವ ಸಿಎಂ ಮಮತಾ ಬ್ಯಾನರ್ಜಿ ಇಂದಿನಿಂದ ಪ್ರಚಾರದ ಅಖಾಡಕ್ಕಿಳಿದ್ದಾರೆ. ಟಿಎಂಸಿ ನಾಯಕರಾದ ಜಾಕಿರ್ ಹುಸೇನ್ ಮತ್ತು ಅಮಿರುಲ್ ಇಸ್ಲಾಂ ಅವರು ಜಂಗೀಪುರ ಮತ್ತು ಸಂಸರ್ ಗಾಂಜ್ ಕ್ಷೇತ್ರಗಳಿಂದ ಕಣಕ್ಕಿಳಿಯುತ್ತಿದ್ದಾರೆಂದು ಟಿಎಂಸಿ ಅಧಿಕೃತವಾಗಿ ತಿಳಿಸಿದೆ.
ವಿಧಾನಸಭಾ ಚುನಾವಣೆಯಲ್ಲಿ ನಂದಿಗ್ರಾಮ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ನಾಯಕ ಸುವೆಂದು ಅಧಿಕಾರಿ ವಿರುದ್ಧ ಮಮತಾ ಬ್ಯಾನರ್ಜಿಯವರು ಸೋಲುಂಡಿ ದ್ದರು. ಕಾಂಗ್ರೆಸ್ ಮಮತಾ ಬ್ಯಾನರ್ಜಿ ಅವರ ವಿರುದ್ಧ ತಮ್ಮ ಪಕ್ಷದ ಅಭ್ಯರ್ಥಿಯನ್ನು ನಿಲ್ಲಿಸುವುದಿಲ್ಲ ಎಂದು ಈಗಾಗಲೇ ಘೋಷಿಸಿದೆ.