Sunday, 15th December 2024

ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ: ಮಮತಾ ಘೊಷಣೆ

ಕೋಲ್ಕೊತಾ: ಪಶ್ಚಿಮ ಬಂಗಾಳದ ಜನತೆಗೆ ಉಚಿತ ಕರೋನಾ ವೈರಸ್ ಲಸಿಕೆ ಯನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಘೋಷಿಸಿದ್ದಾರೆ. ಮುಂಬರುವ ತಿಂಗಳುಗಳಲ್ಲಿ ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ಗೂ ಮುನ್ನ ಮುಖ್ಯಮಂತ್ರಿಯಿಂದ ಈ ಘೋಷಣೆ ಹೊರಬಿದ್ದಿದೆ.

ತೃಣಮೂಲ ಕಾಂಗ್ರೆಸ್ ಸರ್ಕಾರ ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ COVID-19 ಲಸಿಕೆಯನ್ನು ನೀಡುವುದನ್ನು ಖಚಿತ ಪಡಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾರ್ಯಕರ್ತರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ‘ನಮ್ಮ ಸರ್ಕಾರ ರಾಜ್ಯದ ಪ್ರತಿಯೊಬ್ಬರಿಗೂ ಉಚಿತವಾಗಿ ಕೋವಿಡ್ -19 ಲಸಿಕೆ ಯನ್ನು ನೀಡಲಿದೆ’ ಎಂದು ಸಂತಸ ವ್ಯಕ್ತಪಡಿಸಿ ದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆ ಪ್ರಚಾರದಲ್ಲಿ ಬಿಜೆಪಿ, ರಾಜ್ಯದ ಜನತೆಗೆ ಉಚಿತ ಲಸಿಕೆ ನೀಡುವುದಾಗಿ ವಾಗ್ದಾನ ನೀಡಿತ್ತು. ನವೆಂಬರ್ ತಿಂಗಳಲ್ಲಿ ಬಿಹಾರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ನಡೆಯಿತು.