ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರೊಗೆ ಪತ್ರ ಬರೆದ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿದೀದಿ, ರಾಜ್ಯಕ್ಕೆ ಕೇಂದ್ರದಿಂದ ಅಗತ್ಯಕ್ಕೆ ಅನುಗುಣವಾಗಿ ಲಸಿಕೆಯನ್ನು ಪೂರೈಸಲಾಗುತ್ತಿಲ್ಲ ಎಂದಿದ್ದಾರೆ.
ಕೋವಿಡ್ ಲಸಿಕೆ ಕೊರತೆಯ ಬಗ್ಗೆ ದೀದಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ರಾಜ್ಯದಲ್ಲಿ ದಿನ ನಿತ್ಯ ಹನ್ನೊಂದು ಲಕ್ಷ ಲಸಿಕೆಗಳನ್ನು ನೀಡುವ ಸಾಮರ್ಥವಿದ್ದು, ರಾಜ್ಯದಲ್ಲಿ ನಾಲ್ಕು ಲಕ್ಷ ಲಸಿಕೆಯನ್ನು ನೀಡಲಾಗುತ್ತಿದೆ. ಆದಾಗ್ಯೂ, ಪಶ್ಚಿಮ ಬಂಗಾಳಕ್ಕೆ ಕೇಂದ್ರ ಸರ್ಕಾರದಿಂದ ಅಗತ್ಯಕ್ಕೆ ಬೇಕಾದಷ್ಟು ಲಸಿಕೆಯನ್ನು ಪೂರೈಸಲಾಗುತ್ತಿಲ್ಲ. ಅತಿ ಹೆಚ್ಚಿನ ಜನಸಂಖ್ಯೆ ಹಾಗೂ ಹೆಚ್ಚಿನ ನಗರ ಪ್ರದೇಶಗಳನ್ನು ಹೊಂದಿರುವ ರಾಜ್ಯವಾದರೂ ಲಸಿಕೆಯನ್ನು ಅಗತ್ಯಕ್ಕನುಸಾರವಾಗಿ ನೀಡುತ್ತಿಲ್ಲವೆಂದು ಪತ್ರದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಲಸಿಕೆಯ ವಿಚಾರದಲ್ಲಿಯೂ ರಾಜಕೀಯದ ಧೋರಣೆಯನ್ನು ತೋರಿಸುತ್ತಿದೆ. ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಲಸಿಕೆಯನ್ನು ಹೆಚ್ಚು ಒದಗಿಸಲಾಗುತ್ತಿದೆ ಎಂದು ಗುಡುಗಿದ್ದಾರೆ.
ಇಡೀ ದೇಶದಲ್ಲಿಯೇ ಲಸಿಕಾ ಅಭಿಯಾನವನ್ನು ಅತ್ಯಂತ ಯಶಸ್ವಿಯಾಗಿ ಪಶ್ಚಿಮ ಬಂಗಾಳ ನಿಭಾಯಿಸಿದೆ ಎಂದು ಕೂಡ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.