Saturday, 14th December 2024

ನನ್ನ ಅಭಿನಂದನೆ ಸಂದೇಶಕ್ಕೆ ರಾಹುಲ್ ಪ್ರತಿಕ್ರಿಯೆ ನೀಡಿಲ್ಲ: ಮಮತಾ ಗರಂ

ನವದೆಹಲಿ: ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಏಕಾಂಗಿಯಾಗಿ ಸರ್ಕಾರ ರಚನೆ ಮಾಡುವಲ್ಲಿ ವಿಫಲವಾಗಿದೆ. ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಮಾಡಲು ಕಸರತ್ತು ಆರಂಭವಾಗಿದೆ. ಇದರ ನಡುವೆಯೇ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನೀಡಿರುವ ಒಂದು ಹೇಳಿಕೆ ಸಂಚಲ ಮೂಡಿಸಿದೆ.

ನಿನ್ನೆ ಫಲಿತಾಂಶ ಪ್ರಕಟಗೊಂಡ ನಂತರ ನಾನು ರಾಹುಲ್ ಗಾಂಧಿ ಅವರಿಗೆ ಅಭಿನಂದನೆಯ ಸಂದೇಶವನ್ನು ಕಳುಹಿಸಿದ್ದೇನೆ. ಆದರೆ, ರಾಹುಲ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಬಹುಶಃ ಅವರು ಚುನಾವಣಾ ಫಲಿತಾಂಶದಲ್ಲಿ ನಿರತರಾಗಿದ್ದರು ಅನ್ನಿಸುತ್ತೆ. ಅವರು ಇಲ್ಲಿಯವರೆಗೂ ನನ್ನನ್ನು ಸಂಪರ್ಕಿಸಿಲ್ಲ. ಅವರು ನನ್ನನ್ನು ಸಂಪರ್ಕಿಸದಿದ್ದರೂ ನಾನು ಹೆದರುವುದಿಲ್ಲ ಎಂದು ಮಮತಾ ಹೇಳಿದ್ದಾರೆ.

ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷವು ಬರೋಬ್ಬರಿ 29 ಸ್ಥಾನಗಳನ್ನು ಗೆದ್ದಿದ್ದು, ಇಂಡಿಯಾ ಮೈತ್ರಿಕೂಟ ಸರ್ಕಾರ ರಚನೆ ಮಾಡಬೇಕಾದರೆ ನಿರ್ಣಾಯಕ ಪಾತ್ರವನ್ನು ವಹಿಸಲಿದೆ.