Saturday, 14th December 2024

ಮಣಿಪುರ ಚುನಾವಣೆ: ಶೇ.8.94ರಷ್ಟು ಮತದಾನ

ಇಂಫಾಲ್: ಮಣಿಪುರದ 38 ಕ್ಷೇತ್ರಗಳಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ ಮೊದಲ ಹಂತದಲ್ಲಿ ಬೆಳಗ್ಗೆ 9.30ರ ಹೊತ್ತಿಗೆ ಶೇಕಡಾ 8.94ರಷ್ಟು ಮತದಾನವಾಗಿದೆ.

ಒಟ್ಟು 173 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದು ಅವರಲ್ಲಿ 15 ಮಹಿಳಾ ಅಭ್ಯರ್ಥಿಗಳಾಗಿದ್ದಾರೆ. ಕೋವಿಡ್ ಪಾಸಿಟಿವ್ ಅಥವಾ ಕ್ವಾರಂಟೈನ್ ನಲ್ಲಿರುವ ಅಭ್ಯರ್ಥಿಗಳಿಗೆ ಅಪರಾಹ್ನ 3 ಗಂಟೆಯಿಂದ 4 ಗಂಟೆಯವರೆಗೆ ಮತದಾನ ನಡೆಯಲಿದೆ.

ಮತದಾನದಲ್ಲಿ 5,80,607 ಪುರುಷ, 6,28,657 ಮಹಿಳೆ ಮತ್ತು 175 ತೃತೀಯಲಿಂಗ ಮತದಾರರು ಸೇರಿದಂತೆ ಒಟ್ಟು 12,09,439 ಮತದಾರರು 1,721 ಮತಗಟ್ಟೆಗಳಲ್ಲಿ ತಮ್ಮ ಹಕ್ಕು ಚಲಾಯಿಸ ಲಿದ್ದಾರೆ. 60 ಸದಸ್ಯ ಬಲದ ಮಣಿಪುರ ವಿಧಾನಸಭೆಗೆ ಇಂದು ಮತ್ತು ಮಾರ್ಚ್ 5 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮತದಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪ್ರಮುಖ ರಾಜಕೀಯ ನಾಯಕರು ಮನವಿ ಮಾಡಿದ್ದಾರೆ.