ಮಣಿಪುರ: ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಡಿಮೆ ತೀವ್ರತೆಯ ಭೂಕಂಪ ಸಂಭವಿಸಿದೆ.
ರಿಕ್ಟರ್ ಮಾಪಕದಲ್ಲಿ 3.8 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪ ವಿಜ್ಞಾನ ಕೇಂದ್ರ ತಿಳಿಸಿದೆ.
ಮೊಯಿರಾಂಗ್‌ನಿಂದ 67 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಹೇಳಿದೆ. ಮಾ.21ರಂದು ಪಾಕಿಸ್ತಾನ ಹಾಗೂ ಅಫ್ಗಾನಿಸ್ತಾನದಲ್ಲಿ 6.8 ತೀವ್ರತೆಯ ಭೂಕಂಪ ಸಂಭವಿಸಿತ್ತು.
ದೆಹಲಿ ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಭಾಗಗಳಲ್ಲಿ ಕಂಪನದ ಅನುಭವವಾಗಿತ್ತು. ಬುಧವಾರವೂ ದೆಹಲಿಯಲ್ಲಿ ಕಂಪನ ಉಂಟಾಗಿತ್ತು.