ಮಣಿಪುರ: ಹಿಂಸಾಚಾರ ಪೀಡಿತ ರಾಜ್ಯದಲ್ಲಿ ಹೆಚ್ಚಿನ ಗೊಂದಲವನ್ನು ತಡೆಗಟ್ಟಲು ಮಣಿಪುರ ಸರ್ಕಾರವು ಇಂಟರ್ನೆಟ್ ಸೇವೆಗಳ ಮೇಲಿನ ನಿಷೇಧವನ್ನು ಜೂನ್ 10 ರವರೆಗೆ ವಿಸ್ತರಿಸಿದೆ. ಈ ನಿಷೇಧಾಜ್ಞೆಯನ್ನು ಮೇ 3ರಂದು ಜಾರಿಗೊಳಿಸಲಾಗಿತ್ತು.
ಜೂನ್ 10ರ ಮಧ್ಯಾಹ್ನ 3 ಗಂಟೆಯವರೆಗೆ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಇಂಫಾಲ್ ಕಣಿವೆಯಲ್ಲಿ ಮತ್ತು ಸುತ್ತಮುತ್ತ ವಾಸಿಸುವ ಮೈತೈಗಳು ಮತ್ತು ಬೆಟ್ಟಗಳಲ್ಲಿ ನೆಲೆಸಿರುವ ಕುಕಿ ಬುಡಕಟ್ಟು ಜನಾಂಗದವರ ನಡುವೆ ಮುಂದುವರಿದ ಜನಾಂಗೀಯ ಹಿಂಸಾಚಾರವು ಪರಿಶಿಷ್ಟ ಪಂಗಡಗಳ (ಎಸ್‌ಟಿ) ವರ್ಗಕ್ಕೆ ಸೇರಿಸಬೇಕೆಂಬ ಮೈತೈಗಳ ಬೇಡಿಕೆಯ ಮೇಲೆ 70 ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. ಮೇ 3 ರಂದು ಘರ್ಷಣೆ ಪ್ರಾರಂಭವಾಯಿತು.
ರಾಜ್ಯದಲ್ಲಿ ಶಾಂತಿ ಮರುಸ್ಥಾಪನೆಗಾಗಿ ಸುಮಾರು 10,000 ಸೇನೆ ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.