ಈಶಾನ್ಯ ರಾಜ್ಯದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸ ಕೈಗೊಳ್ಳುವುದಾಗಿ ರಾಹುಲ್ ಗಾಂಧಿಯವರು ಹೇಳಿದ್ದರು. ಇದರಂತೆ ಇದೀಗ ಇಂಫಾಲ ತಲುಪಿದ್ದಾರೆ.
ಸಂಕಷ್ಟಕ್ಕೊಳಗಾದ ಜನರಿಗೆ ಚುರಚಂದಪುರ ಜಿಲ್ಲೆಯಲ್ಲಿ 300 ಪರಿಹಾರ ಕೇಂದ್ರ ಗಳನ್ನು ಸ್ಥಾಪಿಸಲಾಗಿದ್ದು, ಈ ಕೇಂದ್ರಗಳಲ್ಲಿ 50,000 ಜನರು ಆಶ್ರಯ ಪಡೆದು ಕೊಂಡಿದ್ದಾರೆ. ಈಗಾಗಲೇ ಇಂಫಾಲ ತಲುಪಿರುವ ರಾಹುಲ್ ಗಾಂಧಿಯವರು, ನೆರವಿನ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿನ ಜನರೊಂದಿಗೆ ಮಾತುಕತೆ ನಡೆಸಲಿದ್ದಾರೆಂದು ತಿಳಿದುಬಂದಿದೆ.
ಮಣಿಪುರದಲ್ಲಿ ಪರಿಶಿಷ್ಟ ಪಂಗಡ ಮೀಸಲಾತಿ ವಿಚಾರವಾಗಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಹಿಂಸಾಚಾರ ನಡೆಯುತ್ತಿದೆ. ಇದುವರೆಗೆ 100ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದು, 300ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.