Friday, 13th December 2024

ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರ: ನಾಳೆ ಮರು ಮತದಾನ

ಇಂಫಾಲ,ಏ.21-ಮಣಿಪುರದ ಇನ್ನರ್ ಮಣಿಪುರ ಲೋಕಸಭಾ ಕ್ಷೇತ್ರದ 11 ಮತಗಟ್ಟೆಗಳಲ್ಲಿ ನಾಳೆ ಮರು ಮತದಾನ ನಡೆಯಲಿದೆ.

ಏ.19ರಂದು ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಈ ಬೂತ್‍ಗಳಲ್ಲಿ ಬೆಂಕಿ, ಹಿಂಸಾಚಾರ ಮತ್ತು ವಿಧ್ವಂಸಕ ಕೃತ್ಯಗಳು ನಡೆದಿರುವ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಮರು ಮತದಾನಕ್ಕೆ ಆದೇಶಿಸಿದೆ.

ನೂತನ ಮತದಾನವನ್ನು ನಿಗದಿಪಡಿಸಲು ಚುನಾವಣಾ ಆಯೋಗದ ನಿರ್ದೇಶನವನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಖುರೈ ಕ್ಷೇತ್ರದ ಮೊಯಿರಂಗ್ಯಾಂಪು ಸಾಜೆಬ್ ಮತ್ತು ತೊಂಗಮ್ ಲೈಕೈ, ಕ್ಷೇತ್ರಗಾವೊದಲ್ಲಿ 4, ಇಂಫಾಲ್ ಪೂರ್ವ ಜಿಲ್ಲೆಯ ತೊಂಗ್ಜುನಲ್ಲಿ 1 ಮತ್ತು ಉರಿಪೋಕ್ನಲ್ಲಿ 3 ಮತ್ತು ಇಂಫಾಲ್ ಪಶ್ಚಿಮ ಜಿಲ್ಲೆಯ ಕೊಂತೌಜಮ್‍ನಲ್ಲಿ 1 ಮತಗಟ್ಟೆಗಳು ಬಾತವಾಗಿವೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮತದಾನದ ದಿನ ಕೆಲವು ಮತಗಟ್ಟೆಗಳಲ್ಲಿ ಗುಂಡಿನ ದಾಳಿ, ಬೆದರಿಕೆ, ಇವಿಎಂಗಳನ್ನು ನಾಶಪಡಿಸಿದ ಘಟನೆಗಳು ನಡೆದವು. ಬೂತ್ ವಶಪಡಿಸಿಕೊಂಡ ಆರೋಪಗಳು ಸಂಘರ್ಷ ಪೀಡಿತ ಮಣಿಪುರದಲ್ಲಿ ವರದಿಯಾಗಿತ್ತು. ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕಾಂಗ್ರೆಸ್ ಮರುಮತದಾನಕ್ಕೆ ಒತ್ತಾಯಿಸಿತ್ತು.

ಮಣಿಪುರದಲ್ಲಿ ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇಲ್ಲಿ ಬಿಜೆಪಿ ರಾಜ್ಯದ ನ್ಯಾಷನಲ್ ಪೀಪಲ್ಸ್ ಪಾರ್ಟಿ ಮತ್ತು ನಾಗಾ ಪೀಪಲ್ಸ್ ಫ್ರಂಟ್ ಜೊತೆ ಮೈತ್ರಿ ಮಾಡಿಕೊಂಡಿದೆ.