ಕಣಿವೆ ಜಿಲ್ಲೆಗಳಿಂದ 1,057 ಶಸ್ತ್ರಾಸ್ತ್ರಗಳು ಮತ್ತು ಗುಡ್ಡಗಾಡು ಜಿಲ್ಲೆಗಳಿಂದ 138 ಶಸ್ತ್ರಾಸ್ತ್ರಗಳನ್ನು ವಶಪಡಿಸಿ ಕೊಳ್ಳಲಾಗಿದೆ. ಅಲ್ಲದೆ, ಸಾವಿರಾರು ಮದ್ದುಗುಂಡು ಗಳನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಕಣಿವೆ ಜಿಲ್ಲೆಗಳಿಂದಲೇ ಅಧಿಕ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಲೂಟಿಯಾದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲು ಭದ್ರತಾ ಪಡೆಗಳು ಗುಡ್ಡಗಾಡು ಮತ್ತು ಕಣಿವೆ ಪ್ರದೇಶಗಳಲ್ಲಿ ನಿರಂತರವಾಗಿ ದಾಳಿ ನಡೆಸುತ್ತಿವೆ.
ಭದ್ರತಾ ಪಡೆಗಳಿಂದ ಶಸ್ತ್ರಾಸ್ತ್ರಗಳನ್ನು ಲೂಟಿ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಮಹಾನಿರ್ದೇಶಕ ರಾಜೀವ್ ಸಿಂಗ್ ಹೇಳಿದ್ದಾರೆ.
ಮೇ 3ರಂದು ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗಳು ಪ್ರಾರಂಭವಾಗಿದ್ದು, ಕಳೆದ ಮೂರು ತಿಂಗಳಿನಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ ಈವರೆಗೆ 160 ಮಂದಿ ಪ್ರಾಣಕಳೆದುಕೊಂಡಿದ್ದಾರೆ. ಮಣಿಪುರದ ಜನಸಂಖ್ಯೆಯ ಸುಮಾರು ಶೇ 53 ರಷ್ಟಿರುವ ಮೇಟಿ ಸಮುದಾಯಗಳು ಇಂಫಾಲ್ ಕಣಿವೆಯಲ್ಲಿ ವಾಸಿಸು ತ್ತಿದ್ದಾರೆ. ಆದರೆ, ಬುಡಕಟ್ಟು ಜನಾಂಗದವರಾದ ನಾಗಾಗಳು ಮತ್ತು ಕುಕಿ ಸಮುದಾಯ ಶೇ 40 ರಷ್ಟಿದ್ದು, ಅವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.