ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಹಿನ್ನೆಲೆ ಯಲ್ಲಿ ಜಾಮೀನು ನೀಡುವಂತೆ ಕೋರಿ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು.
ಮನೀಶ್ ಸಿಸೋಡಿಯಾ, ರಾಜಕೀಯ ಸ್ಥಾನಮಾನಗಳು ಹೊಂದಿರುವ ಕಾರಣದಿಂದ ಸಾಕ್ಷಿಗಳನ್ನು ತಿರುಚುವ ಅಥವಾ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆಯನ್ನು ತಳ್ಳಿಹಾಕಲು ಸಾಧ್ಯವಿಲ್ಲ. ಸಾಕ್ಷ್ಯಗಳ ನಾಶವಾಗದಂತೆ ಕಾಪಾಡಬೇಕಾದ ಹಿನ್ನೆಲೆ ರಾಜಕೀಯ ಹಸ್ತಕ್ಷೇಪದಿಂದ ಉಳಿಸಿಕೊಳ್ಳಲು ಜಾಮೀನು ನಿರಾಕರಿಸಿದೆ ಎಂದು ಕೋರ್ಟ್ ಹೇಳಿದೆ.