ನವದೆಹಲಿ: ದೆಹಲಿಯ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರಿಗೆ ಮತ್ತೆ ಜಾಮೀನು ನಿರಾಕರಿಸಲಾಗಿದೆ.
ದೆಹಲಿ ಅಬಕಾರಿ ನೀತಿ ಪ್ರಕರಣ ಕುರಿತಂತೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿ ಜೈಲಿನಲ್ಲಿರುವ ಸಿಸೋಡಿಯ ಅವರಿಗೆ ಜಾಮೀನು ಮಂಜೂರು ಮಾಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಮಾತ್ರವಲ್ಲ, ಜಾಮೀನು ಅರ್ಜಿ ವಿಚಾರಣೆಯನು ಸೆ.4ಕ್ಕೆ ಮುಂದೂಡಿದೆ.
ಸಿಸೋಡಿಯಾ ಅವರು ಮಧ್ಯಂತರ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು, ತಮ್ಮ ಪತ್ನಿಯ ವೈದ್ಯಕೀಯ ಸ್ಥಿತಿ ಆಧಾರದ ಮೇಲೆ ಜಾಮೀನು ಮಂಜೂರು ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು.
ಆದಾಗ್ಯೂ, ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ವಿಎನ್ ಭಟ್ಟಿ ಅವರಿದ್ದ ಪೀಠ, ಸಿಸೋಡಿಯಾ ಅವರ ಪತ್ನಿಯ ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸಿದ ನಂತರ, ಅವರು ಸಾಕಷ್ಟು ಸ್ಥಿರರಾಗಿದ್ದಾರೆ ಎಂದು ತೀರ್ಮಾನಿಸಿ ಅರ್ಜಿ ವಿಚಾರಣೆಯನ್ನು ಮುಂದೂಡಿದರು.