Friday, 22nd November 2024

ಮನೀಶ್ ಸಿಸೋಡಿಯಾ ಜಾಮೀನು ಅರ್ಜಿ: ಏ.30ಕ್ಕೆ ಮುಂದೂಡಿಕೆ

ವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ಮತ್ತು ಇಡಿ ದಾಖಲಿಸಿರುವ ಭ್ರಷ್ಟಾಚಾರ ಮತ್ತು ಮನಿ ಲಾಂಡರಿಂಗ್ ಪ್ರಕರಣಗಳಲ್ಲಿ ಎಎಪಿ ಮುಖಂಡ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿಯ ಮೇಲಿನ ಆದೇಶವನ್ನು ಇಲ್ಲಿನ ನ್ಯಾಯಾಲಯ ಶನಿವಾರ ಕಾಯ್ದಿರಿಸಿದೆ.

ಸಿಬಿಐ ಮತ್ತು ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಧೀಶ ಕಾವೇರಿ ಬವೇಜಾ ಅವರು ಕೇಂದ್ರ ತನಿಖಾ ಸಂಸ್ಥೆಗಳು ಮತ್ತು ಸಿಸೋಡಿಯಾ ಪರ ವಕೀಲರ ವಾದಗಳನ್ನು ಆಲಿಸಿದ ನಂತರ ಆದೇಶವನ್ನು ಏ.30 ಕ್ಕೆ ಕಾಯ್ದಿರಿಸಿದರು.

ಮುಂಬರುವ ಲೋಕಸಭಾ ಚುನಾವಣೆಯ ಪ್ರಚಾರಕ್ಕಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಎರಡೂ ಪ್ರಕರಣಗಳಲ್ಲಿ ಮಧ್ಯಂತರ ಜಾಮೀನು ಅರ್ಜಿಗಳನ್ನು ಸಲ್ಲಿಸಿದ್ದರು.

ಆದಾಗ್ಯೂ, ನಿಯಮಿತ ಜಾಮೀನು ಅರ್ಜಿಯನ್ನು ಕಾಯ್ದಿರಿಸಲಾಗಿರುವುದರಿಂದ ಈ ಮನವಿ ನಿಷ್ಪ್ರಯೋಜಕವಾಗಿದೆ ಎಂದು ಸಿಸೋಡಿಯಾ ಅವರ ವಕೀಲರು ಇಂದು ನ್ಯಾಯಾಲಯಕ್ಕೆ ತಿಳಿಸಿದರು.

ದೆಹಲಿ ಅಬಕಾರಿ ನೀತಿಯನ್ನು ಮಾರ್ಪಡಿಸುವಾಗ ಅಕ್ರಮಗಳು ನಡೆದಿವೆ, ಪರವಾನಗಿ ಹೊಂದಿರುವವರಿಗೆ ಅನಗತ್ಯ ಅನುಕೂಲ ಗಳನ್ನು ವಿಸ್ತರಿಸ ಲಾಗಿದೆ. ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ ಅಥವಾ ಕಡಿಮೆ ಮಾಡಲಾಗಿದೆ ಮತ್ತು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಪರವಾನಗಿಗಳನ್ನು ವಿಸ್ತರಿಸಲಾಗಿದೆ ಎಂದು ಸಿಬಿಐ ಮತ್ತು ಇಡಿ ಆರೋಪಿಸಿವೆ.

ಸಿಸೋಡಿಯಾ ಅವರನ್ನು ಫೆಬ್ರವರಿ 26, 2023 ರಂದು ಕೇಂದ್ರ ತನಿಖಾ ದಳ (ಸಿಬಿಐ) ಬಂಧಿಸಿತ್ತು.