Saturday, 28th December 2024

Manmohan Singh: ಸರ್ಕಾರಿ ಗೌರವಗಳೊಂದಿಗೆ ಇಂದು ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

manmohan singh

ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಅವರ ಅಂತ್ಯಕ್ರಿಯೆ (Final rites) ಇಂದು ರಾಜ್‌ಘಾಟ್‌ನಲ್ಲಿ (Raj Ghat) ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ. ಗುರುವಾರ ದೆಹಲಿ ಏಮ್ಸ್‌ನಲ್ಲಿ ಸಿಂಗ್‌ ವಿಧಿವಶರಾಗಿದ್ದರು. ಅವರಿಗೆ 92 ವರ್ಷ ವಯಸ್ಸಾಗಿತ್ತು.

ರಾಜ್‌ಘಾಟ್ ಬಳಿಯೇ ಬಹುತೇಕ ಮಾಜಿ ಪ್ರಧಾನಿಗಳ ಅಂತಿಮ ಸಂಸ್ಕಾರ ನಡೆದಿವೆ. ಹಾಗಾಗಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರವೂ ಅಲ್ಲಿಯೇ ನೆರವೇರಲಿದೆ. ಅವರ ಮಕ್ಕಳು ಅಮೆರಿಕದಲ್ಲಿ ವಾಸಿಸುತ್ತಿದ್ದು, ನಿನ್ನೆ ಬಂದಿಳಿದಿದ್ದರು. ಸಿಂಗ್ ಅವರ ಅಂತ್ಯಕ್ರಿಯೆಯ ಸಂಪೂರ್ಣ ಪ್ರಕ್ರಿಯೆಯಲ್ಲಿ ಸರ್ಕಾರವೂ ಭಾಗಿಯಾಗಿದೆ.

ಇಂದು ಬೆಳಗ್ಗೆ 9.30ರವರೆಗೆ ಸಿಂಗ್‌ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಎಐಸಿಸಿ ಕೇಂದ್ರ ಕಚೇರಿಯಲ್ಲಿ ಇಡಲಾಗುತ್ತದೆ. ನಂತರ ಮೆರವಣಿಗೆಯಲ್ಲಿ ರಾಜ್‌ಘಾಟ್‌ಗೆ ಸಾಗಿಸಲಾಗುತ್ತದೆ. ಮಧ್ಯಾಹ್ನ 12 ಗಂಟೆಯ ವೇಎಗೆ ಅಂತ್ಯಸಂಸ್ಕಾರ ನಡೆಯಲಿದೆ.

ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಇಳಿಸಲಾಗಿದೆ. ಕೇಂದ್ರ ಸರ್ಕಾರ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಮತ್ತು 7 ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ. ಅವರ ನಿಧನದಿಂದಾಗಿ ಇಡೀ ದೇಶದಲ್ಲಿ ಶೋಕದ ಅಲೆ ಎದ್ದಿದ್ದು, ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿಯಿಂದ ಹಿಡಿದು ವಿರೋಧ ಪಕ್ಷದ ನಾಯಕರೆಲ್ಲರೂ ಮನಮೋಹನ್‌ ಸಿಂಗ್‌ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.

ಇದನ್ನೂ ಓದಿ: Manmohan Singh: ಮನಮೋಹನ್‌ ಸಿಂಗ್‌ಗೆ ರಾಷ್ಟ್ರಪತಿ ಮುರ್ಮು ಗೌರವ ನಮನ; ಸಚಿವ ಸಂಪುಟದಿಂದ ಸಂತಾಪ!