ನವದೆಹಲಿ: ನಿನ್ನೆ ತಡರಾತ್ರಿ ವಿಧಿವಶರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) ದೇಶಾದ್ಯಂತ ಗೌರವಾರ್ಪಣೆ ವ್ಯಕ್ತವಾಗಿದೆ. ಅವರ ಪಾರ್ಥೀವ ಶರೀರವನ್ನು ಸ್ವಗ್ರಹದಲ್ಲಿಡಲಾಗಿದ್ದು, ಅನೇಕ ರಾಜಕೀಯ ನಾಯಕ, ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ(Narendra Modi) ಕೂಡ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದು ಗೌರವಾರ್ಪಣೆ ಸಲ್ಲಿಸಿದ್ದಾರೆ.
#WATCH | Delhi | PM Narendra Modi pays last respects to late former PM Dr Manmohan Singh and offers condolences to his family pic.twitter.com/7vn1PB1Xdj
— ANI (@ANI) December 27, 2024
ಅಗಲಿದ ನಾಯಕನಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ, ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಮೋದಿ ಜತೆಗಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಗೌರವಾರ್ಪಣೆ ಸಲ್ಲಿಸಿದರು.
#WATCH | Delhi | Union Home Amit Shah pays last respects to former PM Dr Manmohan Singh who passed away last night
— ANI (@ANI) December 27, 2024
(Source: DD) pic.twitter.com/kOh5iMO3oB
92 ವರ್ಷದ ಮನಮೋಹನ್ ಸಿಂಗ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಆರೋಗ್ಯ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಸಿಂಗ್ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿತ್ತು. ಆದರೆ, ರಾತ್ರಿ ಹೊತ್ತಿಗೆ ಅವರು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರು 1991-96ರ ಅವಧಿಯಲ್ಲಿ ಪಿವಿ ನರಸಿಂಹರಾವ್ ನೇತೃತ್ವದ ಸರ್ಕಾರದಲ್ಲಿ ದೇಶದ ಹಣಕಾಸು ಸಚಿವರಾಗಿ ದೇಶದ ಆರ್ಥಿಕತೆಯ ದಿಕ್ಕನ್ನೇ ಬದಲಿಸಿದ್ದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ಅವರ ನಿಧನಕ್ಕೆ ದೇಶ, ರಾಜ್ಯಾದ್ಯಂತ 7 ದಿನ ಶೋಕಾಚರಣೆ ಹಾಗೂ ಇಂದು(ಶುಕ್ರವಾರ) ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ (School-College Holiday ಇರಲಿದೆ. ಜತೆಗೆ ಎಲ್ಲ ಸರ್ಕಾರಿ ಕಾರ್ಯಕ್ರಮಗಳನ್ನು ಒಂದು ವಾರ ಗಳ ಕಾಲ ರದ್ದುಗೊಳಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Dr Manmohan Singh: ಮನಮೋಹನ್ ಸಿಂಗ್; ಭಾರತದ ಆರ್ಥಿಕ ಸುಧಾರಣೆಯ ಹರಿಕಾರ