ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(PM Narendra Modi)ಯವರ ಮನ್ ಕೀ ಬಾತ್(Mann Ki Baat) ಕಾರ್ಯಕ್ರಮದ 117 ನೇ ಸಂಚಿಕೆ ಇಂದು ಪ್ರಸಾರವಾಗಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸಂವಿಧಾನಕ್ಕೆ ಸಂಬಂಧಿಸಿದಂತೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ಈ ಸಮಯದಲ್ಲಿ ಅವರು ಮಹಾಕುಂಭ ಮತ್ತು ಪ್ರಯಾಗ್‌ರಾಜ್ ಬಗ್ಗೆಯೂ ಪ್ರಸ್ತಾಪಿಸಿದರು. 2025ರ ಜನವರಿ 26ಕ್ಕೆ ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬಲಿವೆ. ಇದು ನಮಗೆಲ್ಲರಿಗೂ ಹೆಮ್ಮೆಯ ಸಂಗತಿ ಎಂದರು.
"इस बार प्रयागराज में देश और दुनिया के श्रद्धालु digital महाकुंभ के भी साक्षी बनेंगे |"
— Mann Ki Baat Updates मन की बात अपडेट्स (@mannkibaat) December 29, 2024
– प्रधानमंत्री @narendramodi.#MannKiBaat #MahaKumbh2025 @PMOIndia @UPGovt @MahaaKumbh pic.twitter.com/pSHXtW2UHy
ಸಂವಿಧಾನ ಪೀಠಿಕೆ ಓದಿ…ವಿಡಿಯೊ ಮಾಡಿ
ಸಂವಿಧಾನದ ಪರಂಪರೆಯೊಂದಿಗೆ ದೇಶದ ನಾಗರಿಕರನ್ನು ಸಂಪರ್ಕಿಸಲು, http://constitution75.com ಹೆಸರಿನ ವಿಶೇಷ ವೆಬ್‌ಸೈಟ್ ಅನ್ನು ಸಹ ರಚಿಸಲಾಗಿದೆ. ಇದರಲ್ಲಿ ನೀವು ಸಂವಿಧಾನದ ಪೀಠಿಕೆಯನ್ನು ಓದಿದ ನಂತರ ನಿಮ್ಮ ವೀಡಿಯೊವನ್ನು ಅಪ್‌ಲೋಡ್ ಮಾಡಬಹುದು ಎಂದು ಪ್ರಧಾನಿ ಮೋದಿ ಹೇಳಿದರು. ವಿವಿಧ ಭಾಷೆಗಳಲ್ಲಿ ಸಂವಿಧಾನವನ್ನು ಓದಬಹುದು, ಸಂವಿಧಾನದ ಬಗ್ಗೆ ಪ್ರಶ್ನೆಗಳನ್ನು ಕೇಳಬಹುದು. ಮನ್ ಕಿ ಬಾತ್ ಕೇಳುಗರು, ಶಾಲೆಗಳಲ್ಲಿ ಓದುತ್ತಿರುವ ಮಕ್ಕಳು ಮತ್ತು ಕಾಲೇಜಿಗೆ ಹೋಗುವ ಯುವಕರು ಈ ವೆಬ್‌ಸೈಟ್ ಅನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಪ್ರಧಾನಮಂತ್ರಿ ಮನವಿ ಮಾಡಿದರು.
This month's #MannKiBaat covers a wide range of topics that will interest you. Do listen! https://t.co/NP97ZuvP5z
— Narendra Modi (@narendramodi) December 29, 2024
ಮಹಾ ಕುಂಭಮೇಳದ ಬಗ್ಗೆ ಪ್ರಸ್ತಾಪ
ಪ್ರಧಾನಿ ಮೋದಿ ಇತ್ತೀಚೆಗೆ ಪ್ರಯಾಗ್‌ರಾಜ್‌ಗೆ ಭೇಟಿ ನೀಡಿದ್ದರು. ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಹಾಕುಂಭದ ಸಿದ್ಧತೆಯ ಬಗ್ಗೆಯೂ ಪ್ರಸ್ತಾಪಿಸಿದರು. ಮಹಾಕುಂಭದ ವಿಶೇಷತೆ ಅದರ ವೈಶಾಲ್ಯದಲ್ಲಿ ಮಾತ್ರವಲ್ಲ, ಅದರ ವೈವಿಧ್ಯತೆಯಲ್ಲಿಯೂ ಇದೆ. ಈ ಕಾರ್ಯಕ್ರಮದಲ್ಲಿ ಕೋಟಿಗಟ್ಟಲೆ ಜನರು ಸೇರುತ್ತಾರೆ. ಲಕ್ಷಗಟ್ಟಲೆ ಸಂತರು, ಸಾವಿರಾರು ಸಂಪ್ರದಾಯಗಳು, ನೂರಾರು ಪಂಗಡಗಳು, ಹಲವಾರು ಅಖಾಡಗಳು, ಎಲ್ಲರೂ ಒಟ್ಟಾಗಿ ಸೇರುತ್ತಾರೆ ಎಂದು ಪ್ರಧಾನಿ ಮೋದಿ ಹೇಳಿದರು.
ಜನವರಿ 13 ರಿಂದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ನಡೆಯಲಿದೆ. ಈ ವೇಳೆ ಅಲ್ಲಿನ ಸಂಗಮ್ ದಂಡೆಯಲ್ಲಿ ಭವ್ಯ ಸಿದ್ಧತೆಗಳು ನಡೆಯುತ್ತಿವೆ. ಕುಂಭದಲ್ಲಿ ಭಾಗವಹಿಸಿದಾಗ ಒಡಕು, ದ್ವೇಷದ ಭಾವನೆ ಹೋಗಲಾಡಿಸುವ ಸಂಕಲ್ಪ ಮಾಡೋಣ. ಸಮಾಜದಲ್ಲಿ, ಕುಂಭಮೇಳದಲ್ಲಿ ಇದೇ ಮೊದಲ ಬಾರಿಗೆ AI ಚಾಟ್‌ಬಾಟ್ ಅನ್ನು ಬಳಸಲಾಗುತ್ತದೆ. ಎಂದು ತಿಳಿಸಿದ್ದಾರೆ.
ಮನ್ ಕೀ ಬಾತ್‌ನ ಪ್ರಮುಖಾಂಶಗಳು
- ಮಕ್ಕಳಿಗೆ ನಮ್ಮ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಪರಿಚಯ ಮಾಡುವ ನಿಟ್ಟಿನಲ್ಲಿ KTB ಆನಿಮೇಶನ್ ಸೀಸನ್ 2 ಕೂಡ ರಿಲೀಸ್
- 100ನೇ ಜನ್ಮದಿನಾಚರಣೆ ಹಿನ್ನೆಲೆ ಸಿನಿಮಾ ದಿಗ್ಗಜ ರಾಜ್ ಕಪೂರ್, ತೆಲುಗು ಚಿತ್ರರಂಗ ಹಿರಿಯ ನಟ ಅಕ್ಕಿನೇನಿ ನಾಗೇಶ್ವರ ರಾವ್ ಮತ್ತು ಸಂಗೀತ ಮಾಂತ್ರಿಕ ಮೊಹಮ್ಮದ್ ರಫಿ ಸಾಹಬ್ ಅವರನ್ನು ಸ್ಮರಿಸಿದ ಪ್ರಧಾನಿ
- ಮುಂದಿನ ವರ್ಷ ವಿಶ್ವ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಶೃಂಗಸಭೆ ಅಂದರೆ ವೇವ್ಸ್ ಶೃಂಗಸಭೆಯನ್ನು ನಮ್ಮ ದೇಶದಲ್ಲಿ ಮೊದಲ ಬಾರಿಗೆ ಆಯೋಜಿಸಲಾಗುವುದು ಎಂದು ಪ್ರಧಾನಿ ಮೋದಿ ಹೇಳಿದರು.
- ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಭಾರತೀಯರು ವಾಸವಿರುವ ಪೆರುಗ್ವೆಯಲ್ಲಿ ಅಲ್ಲಿನ ಜನ ಆಯುರ್ವೇದ ಚಿಕಿತ್ಸೆ ಬಗ್ಗೆ ಭಾರತೀಯರಿಂದ ಸಲಹೆ ಪಡೆಯುತ್ತಿದ್ದಾರೆ.
- ವಿಶ್ವದ ಅತ್ಯಂತ ಪುರಾತನ ತಮಿಳು ಭಾಷೆಯನ್ನು ಪ್ರಪಂಚದಾದ್ಯಂತದ ದೇಶಗಳಲ್ಲಿ ಇದನ್ನು ಕಲಿಯುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಕಳೆದ ತಿಂಗಳ ಕೊನೆಯಲ್ಲಿ ಫಿಜಿಯಲ್ಲಿ ಭಾರತ ಸರ್ಕಾರದ ಬೆಂಬಲದೊಂದಿಗೆ ತಮಿಳು ಕಲಿಸುವ ಕಾರ್ಯಕ್ರಮವೊಂದು ಆರಂಭವಾಯಿತು.
ಮನ್ ಕಿ ಬಾತ್ ಕಾರ್ಯಕ್ರಮ ಅಕ್ಟೋಬರ್ 3, 2014 ರಂದು ಪ್ರಾರಂಭವಾಯಿತು. ಪ್ರಧಾನಿ ಪ್ರತಿ ತಿಂಗಳು ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡುತ್ತಾ, ಭಾರತದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಲಕ್ಷಾಂತರ ಜನರನ್ನು ಪ್ರೇರೇಪಿಸುತ್ತಿದ್ದಾರೆ. ಪ್ರತಿ ತಿಂಗಳು ವಿವಿಧ ಕ್ಷೇತ್ರದ ಸಾಧನೆಗಳು, ಕಹಿಘಟನೆ, ಸಂತೋಷ ಮತ್ತು ಹೆಮ್ಮೆಯ ಕ್ಷಣಗಳನ್ನು ಮತ್ತು ನವ ಭಾರತಕ್ಕಾಗಿ ಸಲಹೆಗಳನ್ನು ಮೋದಿ ಈ ಕಾರ್ಯಕ್ರಮದ ಮೂಲಕ ಹಂಚಿಕೊಳ್ಳುತ್ತಿದ್ದಾರೆ.
22 ಭಾರತೀಯ ಭಾಷೆಗಳು ಮತ್ತು 29 ಉಪಭಾಷೆಗಳು ಸೇರಿದಂತೆ, ‘ಮನ್ ಕಿ ಬಾತ್’ ಅನ್ನು ಫ್ರೆಂಚ್, ಚೈನೀಸ್, ಇಂಡೋನೇಷಿಯನ್, ಟಿಬೆಟಿಯನ್, ಬರ್ಮೀಸ್, ಬಲೂಚಿ, ಅರೇಬಿಕ್, ಪಶ್ತು, ಪರ್ಷಿಯನ್, ಡಾರಿ ಮತ್ತು ಸ್ವಾಹಿಲಿ ಸೇರಿದಂತೆ 11 ವಿದೇಶಿ ಭಾಷೆಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಮನ್ ಕಿ ಬಾತ್ ಅನ್ನು ಆಲ್ ಇಂಡಿಯಾ ರೇಡಿಯೊದ 500 ಕ್ಕೂ ಹೆಚ್ಚು ಪ್ರಸಾರ ಕೇಂದ್ರಗಳು ಪ್ರಸಾರ ಮಾಡುತ್ತವೆ.
ಈ ಸುದ್ದಿಯನ್ನೂ ಓದಿ: Modi in Kuwait: ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಪ್ರಶಸ್ತಿ ಪ್ರದಾನ