Sunday, 15th December 2024

ಬಿಜೆಪಿ ಪಕ್ಷಕ್ಕೆ ಮನ್‌ಪ್ರೀತ್‌ ಸಿಂಗ್‌ ಬಾದಲ್‌ ಸೇರ್ಪಡೆ

ವದೆಹಲಿ: ಪಂಜಾಬ್‌ ಕಾಂಗ್ರೆಸ್‌ ಮುಖಂಡ ಮನ್‌ಪ್ರೀತ್‌ ಸಿಂಗ್‌ ಬಾದಲ್‌ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರು ಬುಧವಾರ ಪಕ್ಷಕ್ಕೆ ಸೇರಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಹಾಜರಿದ್ದರು.

ಪಕ್ಷದಲ್ಲಿನ ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಭ್ರಮನಿರಸನಗೊಂಡಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

2010ರಲ್ಲಿ ಬಾದಲ್‌ ಪಂಜಾಬ್‌ ಹಣಕಾಸು ಮಂತ್ರಿಯಾಗಿದ್ದರು. ನಂತರ ಪಿಪಲ್ಸ್‌ ಪಾರ್ಟಿ ಆಫ್‌ ಪಂಜಾಬ್‌ (ಪಿಪಿಪಿ) ಪಕ್ಷ ಸ್ಥಾಪನೆ ಮಾಡಿದ್ದರು. 2016ರಲ್ಲಿ ಆ ಪಕ್ಷವನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದ್ದರು. ಇದೀಗ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.