Saturday, 14th December 2024

ಈ ರಾಜ್ಯದ 6 ಜಿಲ್ಲೆಗಳಲ್ಲಿ ಮಾಸ್ಕ್ ಕಡ್ಡಾಯ

ಲಖನೌ: ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ, ದೆಹಲಿ ಮತ್ತು ಉತ್ತರ ಪ್ರದೇಶ ರಾಜಧಾನಿ ಲಖನೌ ವ್ಯಾಪ್ತಿಯ 6 ಜಿಲ್ಲೆಗಳಲ್ಲಿ ಮಾಸ್ಕ್ ಧರಿಸುವುದನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರ ಕಡ್ಡಾಯಗೊಳಿಸಿದೆ.

ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿರುವ ಜಿಲ್ಲೆಗಳಲ್ಲಿ ಪರಿಣಾಮ ಬೀರಿದ್ದನ್ನು ಗಮನದಲ್ಲಿಟ್ಟುಕೊಂಡು ಉತ್ತರ ಪ್ರದೇಶ ಸರ್ಕಾರವು ಈ ಕ್ರಮ ಕೈಗೊಂಡಿದೆ. ಗೌತಂ ಬುದ್ಧ ನಗರ, ಗಾಜಿಯಾಬಾದ್, ಹಪುರ್, ಮೀರಠ್, ಬುಲಂದ್‌ಶಹರ್, ಬಾಘ್‌ಪತ್ ಹಾಗೂ ರಾಜಧಾನಿ ಲಖನೌನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಲೇಬೇಕು ಎಂದು ಸರ್ಕಾರದ ವಕ್ತಾರರೊಬ್ಬರು ತಿಳಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಗೌತಂ ಬುದ್ಧ ನಗರದಲ್ಲಿ 65, ಗಾಜಿಯಾಬಾದ್‌ನಲ್ಲಿ 20 ಹಾಗೂ ಲಖನೌನಲ್ಲಿ 10 ಮಂದಿಗೆ ಸೋಂಕು ದೃಢಪಟ್ಟಿದೆ.