Monday, 25th November 2024

ಸಪ್ತ ರಾಜ್ಯಗಳಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ಗಳ ಸ್ಥಾಪನೆ

ವದೆಹಲಿ: ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶದಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ಗಳನ್ನ ಸ್ಥಾಪಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

5 ಎಫ್ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉದ್ಯಾನಗಳು ದೇಶದಲ್ಲಿ ಜವಳಿ ವಲಯವನ್ನ ಉತ್ತೇಜಿಸಲಿವೆ ಎಂದು ಅವರು ಹೇಳಿದರು.

‘ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ಗಳು 5 ಎಫ್ ದೃಷ್ಟಿಕೋನಕ್ಕೆ ಅನುಗುಣವಾಗಿ ಜವಳಿ ವಲಯ ವನ್ನ ಉತ್ತೇಜಿಸಲಿವೆ. ತಮಿಳುನಾಡು, ತೆಲಂಗಾಣ, ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ಮಧ್ಯಪ್ರದೇಶ ಮತ್ತು ಉತ್ತರ ಪ್ರದೇಶ ದಲ್ಲಿ ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್ಗಳನ್ನ ಸ್ಥಾಪಿಸ ಲಾಗುವುದು ಎಂದು ಹಂಚಿಕೊಳ್ಳಲು ಸಂತೋಷವಾಗಿದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್’ನಲ್ಲಿ, ‘ಪಿಎಂ ಮಿತ್ರ ಮೆಗಾ ಜವಳಿ ಪಾರ್ಕ್’ಗಳು ಜವಳಿ ಕ್ಷೇತ್ರಕ್ಕೆ ಅತ್ಯಾಧುನಿಕ ಮೂಲಸೌಕರ್ಯವನ್ನ ಒದಗಿಸುತ್ತವೆ, ಕೋಟಿಗಟ್ಟಲೆ ಹೂಡಿಕೆಯನ್ನ ಆಕರ್ಷಿಸುತ್ತವೆ ಮತ್ತು ಲಕ್ಷಾಂತರ ಉದ್ಯೋಗಗಳನ್ನ ಸೃಷ್ಟಿಸುತ್ತವೆ. ಇದು ‘ಮೇಕ್ ಇನ್ ಇಂಡಿಯಾ’ ಮತ್ತು ‘ಮೇಕ್ ಫಾರ್ ದಿ ವರ್ಲ್ಡ್’ಗೆ ಉತ್ತಮ ಉದಾಹರಣೆಯಾಗಲಿದೆ ಎಂದರು.