Wednesday, 9th October 2024

ಪುರುಷರಿಗಾಗಿ ರಾಷ್ಟ್ರೀಯ ಆಯೋಗ ರಚನೆ ಕೋರಿ ಜುಲೈ 3 ರಂದು ವಿಚಾರಣೆ

ನವದೆಹಲಿ: ರಾಷ್ಟ್ರಮಟ್ಟದಲ್ಲಿ ಮಹಿಳಾ ಆಯೋಗ ಇರುವಂತೆ, ಪುರುಷರ ವಿರುದ್ಧ ನಡೆಯುವ ಕೌಟುಂಬಿಕ ದೌರ್ಜನ್ಯದ ದೂರನ್ನು ಕೇಳುವ, ಸಮಸ್ಯೆಗೆ ಸ್ಪಂದಿಸಲು ‘ಪುರುಷರಿಗಾಗಿ ರಾಷ್ಟ್ರೀಯ ಆಯೋಗ’ವನ್ನು ರಚಿಸುವಂತೆ ಕೋರಿ ಸಲ್ಲಿಸಲಾದ ಸಾರ್ವ ಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ಜುಲೈ 3 ರಂದು ವಿಚಾರಣೆ ನಡೆಸಲಿದೆ.

ಭಾರತದಲ್ಲಿ ವಿವಾಹಿತ ಪುರುಷರ ಆತ್ಮಹತ್ಯೆ ಪ್ರಮಾಣ ಹೆಚ್ಚುತ್ತಿದ್ದು ಆತಂಕ ಮೂಡಿ ಸುವ ವಿಷಯವಾಗಿದೆ.

ಕೌಟುಂಬಿಕ ಹಿಂಸಾಚಾರಕ್ಕೆ ಒಳಗಾಗುವ ಪುರುಷರ ಹಿತಾಸಕ್ತಿ ಕಾಪಾಡಲು ಮಾರ್ಗ ಸೂಚಿಗಳನ್ನು ರೂಪಿಸಲು ಆಯೋಗ ರಚನೆ ಮಾಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ.

ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ದೀಪಂಕರ್ ದತ್ತಾ ಅವರನ್ನೊಳ ಗೊಂಡ ಪೀಠವು ಸೋಮವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗಾಗಿ ಪಟ್ಟಿ ಮಾಡಿದೆ.

ವಿವಾಹಿತ ಪುರುಷರ ಆತ್ಮಹತ್ಯೆಯ ಸಮಸ್ಯೆಯನ್ನು ನಿಭಾಯಿಸಲು ಮತ್ತು ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಪುರುಷರ ದೂರುಗಳನ್ನು ಸ್ವೀಕರಿಸಲು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ಕೋರಲಾಗಿದೆ.