Thursday, 12th December 2024

ಮೆಟ್ರೋ ಮ್ಯಾನ್ ಇ.ಶ್ರೀಧರನ್’ಗೆ ಬಿಜೆಪಿ ಟಿಕೆಟ್: ಪಾಲಕ್ಕಾಡ್ ಕ್ಷೇತ್ರದಿಂದ ಕಣಕ್ಕೆ

ನವದೆಹಲಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಮೆಟ್ರೋ ಮ್ಯಾನ್ ಖ್ಯಾತಿಯ ಸಿಎಂ ಅಭ್ಯರ್ಥಿ ಎಂದೇ ಪರಿಗಣಿಸಲಾದ ಇ. ಶ್ರೀಧರನ್ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇ.ಶ್ರೀಧರನ್ ಅವರು ಕೇರಳದ ಪಾಲಕ್ಕಾಡ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ. ಕೇರಳ ಬಿಜೆಪಿ ಘಟಕದ ಮಾಜಿ ಅಧ್ಯಕ್ಷ ಕುಮ್ಮನಮ್ ಅವರು ನೆಮೊಮ್ ವಿಧಾನಸಭೆ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಕಂಜಿರಪಲ್ಲಿ ವಿಧಾನಸಭೆ ಕ್ಷೇತ್ರದಿಂದ ಆಲ್ಫಾನ್ಸೊ, ತ್ರಿಶೂರ್ ಅಸೆಂಬ್ಲಿ ಕ್ಷೇತ್ರದಿಂದ ಸುರೇಶ್ ಗೋಪಿ ಸ್ಪರ್ಧಿಸಲಿದ್ದಾರೆ. ಡಾ. ಅಬ್ದುಲ್ ಸಲಾಂ ತಿರೂರು ಕ್ಷೇತ್ರದಿಂದ, ಮಾಜಿ ಡಿಜಿಪಿ ಜಾಕೊಬ್ ಥಾಮಸ್ ಅವರು ಇರಿಂಜಲಕುಡ ಅಸೆಂಬ್ಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ.

ಕೇರಳ ಬಿಜೆಪಿಯು ಸ್ಥಳೀಯು ನಾಲ್ಕು ಪಕ್ಷಗಳೊಂದಿಗೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿದೆ.