Thursday, 12th December 2024

ಮೆಕ್ಸಿಕನ್ ಮಹಿಳಾ ಡಿಜೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ: ಮೆಕ್ಸಿಕನ್ ಮಹಿಳಾ ಡಿಜೆ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

35 ವರ್ಷದ ಆರೋಪಿ ಕೂಡ ಡಿಜೆ ಆಗಿದ್ದು, ಸಂತ್ರಸ್ತೆ ಕಳೆದ ವಾರ ಆತನ ವಿರುದ್ಧ ದೂರು ನೀಡಿದ ನಂತರ ಆತನನ್ನು ಬಂಧಿಸಲಾಗಿದೆ ಎಂದು ಬಾಂದ್ರಾ ಪೊಲೀಸ್ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ದೂರಿನ ಪ್ರಕಾರ, ಆರೋಪಿಯು 2019 ರಿಂದ ಹಲವಾರು ಸಂದರ್ಭಗಳಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ವೆಸಗಿದ್ದಾನೆ. ಮಹಿಳೆ ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿದ್ದು, ಆರೋಪಿ ಆಕೆಯ ಮ್ಯಾನೇಜರ್ ಎಂದು ಹೇಳಿದ್ದಾರೆ. 2017 ರಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಆರೋಪಿಯನ್ನು ಭೇಟಿಯಾಗಿದ್ದೆ ಎಂದು ಮಹಿಳೆ ತನ್ನ ದೂರಿನಲ್ಲಿ ತಿಳಿಸಿದ್ದಾರೆ.

ಅವರು ಜುಲೈ 2019 ರಲ್ಲಿ ಬಾಂದ್ರಾದ ತನ್ನ ಮನೆಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ನಂತರ ಅವರು ಅನೇಕ ಸಂದರ್ಭಗಳಲ್ಲಿ ಅತ್ಯಾಚಾರ ಎಸಗಿದ್ದಾರೆ. ಆರೋಪಿಯು ತನ್ನನ್ನು ನಿರಾಕರಿಸಿದರೆ ಕೆಲಸದಿಂದ ಹೊರಹಾಕುವುದಾಗಿ ಬೆದರಿಕೆ ಹಾಕುವ ಮೂಲಕ ತನ್ನ ಮೇಲೆ ಬಲವಂತವಾಗಿ ಅತ್ಯಾಚಾರ ಮಾಡುತ್ತಿದ್ದ. ಅಲ್ಲದೇ ತನ್ನ ಮೇಲಿನ ಅತ್ಯಾಚಾರವನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದು, ಅದನ್ನು ತೋರಿಸಿ ಬ್ಲಾಕ್ ಮೇಲ್ ಮಾಡಿ ಪದೇ ಪದೇ ಅತ್ಯಾಚಾರ ಮಾಡುತ್ತಿದ್ದ ಎಂದು ಆರೋಪಿಸಿದ್ದಾರೆ. 2020ರಲ್ಲಿ ಆತ ಬೇರೊಬ್ಬ ಮಹಿಳೆಯನ್ನು ಮದುವೆಯಾಗಿದ್ದರೂ, ಆರೋಪಿ ತನಗೆ ಅಸಭ್ಯ ಅನುಚಿತ ಚಿತ್ರಗಳನ್ನು ಕಳುಹಿಸುತ್ತಿದ್ದ.

ಅಲ್ಲದೆ ಆಕೆಯಿಂದ ಲೈಂಗಿಕ ಬೇಡಿಕೆಗಳನ್ನು ಪೂರೈಸಿಕೊಳ್ಳುತ್ತಿದ್ದ. ದೂರಿನಲ್ಲಿ ಆರೋಪಿಸಿದ್ದಾರೆ.