Saturday, 14th December 2024

ಮಿಜೋರಾಂ ಚುನಾವಣೆಯ ಮತ ಎಣಿಕೆ ಆರಂಭ

ಮಿಜೋರಾಂ: 40 ಸದಸ್ಯ ಬಲದ ಮಿಜೋರಾಂ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮಧ್ಯಾಹ್ನದ ವೇಳೆ ಪೂರ್ಣ ಫಲಿತಾಂಶ ಹೊರ ಬರಲಿದೆ. 8.57 ಲಕ್ಷ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಎಂಎನ್‌ಎಫ್, ಝಡ್‌ಪಿಎಂ ಮತ್ತು ಕಾಂಗ್ರೆಸ್ ನಡುವೆ ಪೈಪೋಟಿ ಇದೆ.

ಮಿಜೋರಾಂ ವಿಧಾನಸಭೆಗೆ ನವೆಂಬರ್ 7ರಂದು ಮತದಾನ ನಡೆದಿದ್ದು, ಶೇ.80.66ರಷ್ಟು ಜನರು ಮತ ಹಕ್ಕು ಚಲಾಯಿಸಿದ್ದರು. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ, ಮಧ್ಯಪ್ರದೇಶ ವಿಧಾನಸಭೆ ಫಲಿತಾಂಶ ಭಾನುವಾರ ಪ್ರಕಟವಾಗಿದ್ದು, ಸೋಮವಾರ ಮಿಜೋರಾಂ ಫಲಿತಾಂಶ ಪ್ರಕಟವಾಗಲಿದೆ.

ಮಿಜೋರಾಂನ ಜನರಿಗೆ ಡಿಸೆಂಬರ್ 3ರ ಭಾನುವಾರ ವಿಶೇಷ ಪ್ರಾಮುಖ್ಯತೆಯ ದಿನವಾಗಿದ್ದರಿಂದ ಮತ ಎಣಿಕೆ ದಿನಾಂಕವನ್ನು ಒಂದು ದಿನ ಮುಂದೂಡ ಲಾಗಿತ್ತು.