ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಬಾಲಕಿಯರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ.
ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ರೆದ್ವಾನಿ ಬಾಲಾ ಗ್ರಾಮದ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರು ಇಬ್ಬರು ಬಾಲಕಿಯನ್ನು ಒತ್ತಾಯಾಳಾಗಿರಿಸಿ ಕೊಂಡಿದ್ದರು. ಈ ವೇಳೆ ಉಗ್ರರು ಸೈನಿಕರನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು ಸೈನಿಕರ ಗುಂಡಿನ ದಾಳಿಗೆ ಉಗ್ರರು ಮೃತಪಟ್ಟಿದ್ದಾರೆ.