Friday, 22nd November 2024

ಸೋಪೋರ್‌ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಬಾರಾಮುಲ್ಲಾ ಜಿಲ್ಲೆಯ ಸೊಪೊರ್‌ ಪಟ್ಟಣ ವ್ಯಾಪ್ತಿಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ.

ಹತರಾಗಿರುವವರಲ್ಲಿ ಒಬ್ಬನನ್ನು ಉಗ್ರ ಫಯಾಸ್‌ ವಾರ್‌ ಎಂದು ಗುರುತಿಸಲಾಗಿದೆ. ಈತ ಹಲವು ದಾಳಿಗಳು, ಹಿಂಸಾಚಾರ ಮತ್ತು ನಾಗರಿಕರ ಹತ್ಯೆಯಲ್ಲಿ ಭಾಗಿಯಾಗಿದ್ದಾನೆ. ಉತ್ತರ ಕಾಶ್ಮೀರದಲ್ಲಿ ನಡೆದ ಹಿಂಸಾಚಾರದಲ್ಲಿ ಈತ ಸಂಚು ರೂಪಿಸಿದ್ದ’ ಎಂದು ಕಾಶ್ಮೀರ ವಯಲದ ಐಜಿಪಿ ತಿಳಿಸಿದ್ದಾರೆ.

ಉಗ್ರರು ಅಡಗಿರುವ ಖಚಿತ ಮಾಹಿತಿ ಆಧರಿಸಿ, ಸೊಪೊರ್‌ನ ವಾರ್ಪೊರದಲ್ಲಿ ಗುರುವಾರ ರಾತ್ರಿ ಕಾರ್ಯಾಚರಣೆ ಆರಂಭಿಸಿದ ಭದ್ರತಾ ಪಡೆಗಳು, ಆ ಪ್ರದೇಶ ದಲ್ಲಿದ್ದ ಪ್ರತಿ ಮನೆಯಲ್ಲೂ ಶೋಧ ಕಾರ್ಯ ಕೈಗೊಂಡವು. ನಂತರ ಉಗ್ರರಿಗೆ ಶರಣಾಗುವಂತೆ ತಿಳಿಸಿದರು. ಶರಣಾಗತಿಗೆ ಒಪ್ಪದ ಉಗ್ರರು, ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಲು ಆರಂಭಿಸಿದರು. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಉಗ್ರರ ಮೇಲೆ ಗುಂಡಿನ ದಾಳಿ ನಡೆಸಿದರು.

ಈ ವರ್ಷದ ಆರಂಭದಿಂದ ಇಲ್ಲಿವರೆಗೆ ಭದ್ರತಾ ಪಡೆಗಳು ಕಾಶ್ಮೀರ ಕಣಿವೆಯಲ್ಲಿ 80 ಉಗ್ರರನ್ನು ಕೊಂದಿದ್ದಾರೆ.