Wednesday, 11th December 2024

ಮಿಲ್ಖಾ ಸಿಂಗ್ ಪತ್ನಿ ಕರೋನಾಗೆ ಬಲಿ

ಮೊಹಾಲಿ: ಫ್ಲೈಯಿಂಗ್ ಸಿಖ್ ಖ್ಯಾತಿಯ ಅಥ್ವೀಟ್ ಮಿಲ್ಖಾ ಸಿಂಗ್ ಅವರ ಪತ್ನಿ ಭಾರತೀಯ ಮಹಿಳಾ ವಾಲಿಬಾಲ್ ತಂಡದ ಮಾಜಿ ನಾಯಕಿ ನಿರ್ಮಲ್ ಕೌರ್(85) ಕೋವಿಡ್-19 ಸೋಂಕಿನಿಂದಾಗಿ ನಿಧನರಾಗಿದ್ದಾರೆ.

ಕೋವಿಡ್ ಸೋಂಕಿಗೆ ತುತ್ತಾಗಿದ್ದ ಅವರನ್ನು ಇತ್ತೀಚೆಗೆ ಮೊಹಾಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿ ಯಾಗದೇ ಮೃತಪಟ್ಟಿದ್ದಾರೆ. ನಿರ್ಮಲ್ ಅವರು, ಪತಿ ಮಿಲ್ಖಾ ಸಿಂಗ್, ಒಬ್ಬ ಮಗ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಪತಿ ಮಿಲ್ಖಾ ಸಿಂಗ್ ಅವರು ಕೋವಿಡ್ ನಿಂದಾಗಿ ಐಸಿಯು ಯಲ್ಲಿರುವುದರಿಂದ ಅವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿರಲಿಲ್ಲ.