Saturday, 14th December 2024

ಕರೋನ ವೈರಸ್‌ನಿಂದ ಚೇತರಿಸಿಕೊಂಡ ಸಚಿವೆ ಸ್ಮೃತಿ ಇರಾನಿ

ನವದೆಹಲಿ : ಕೇಂದ್ರ ಜವಳಿ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಸ್ಮೃತಿ ಜುಬಿನ್ ಇರಾನಿ ಅವರು ಕರೋನ ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಗುರುವಾರ ಟ್ವೀಟ್ ಮಾಡಿದ್ದಾರೆ.

ಗುಣಮುಖರಾದ ಬಳಿಕ ಟ್ವೀಟ್ ಮಾಡಿರುವ ಇರಾನಿ ‘ಪ್ರತಿಯೊಬ್ಬರಿಗೂ ಅವರ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗಾಗಿ ನನ್ನ ಕೃತಜ್ಞತೆಯನ್ನು ಅರ್ಪಿಸುತ್ತೇನೆ. ಅಲ್ಲದೆ ಶೀಘ್ರವೇ ಕರ್ತವ್ಯಕ್ಕೆ ಮರಳುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಎಂದು ಹೇಳಿ ದರು.

ಅಕ್ಟೋಬರ್ 28 ರಂದು ಸ್ಮೃತಿ ಇರಾನಿ ಕೊರೋನಾ ಪರೀಕ್ಷೆಗೆ ಒಳಗಾಗಿದ್ದರು. ಇದೀಗ ಚಿಕಿತ್ಸೆ ಬಳಿಕ ಅವರು ಚೇತರಿಸಿಕೊಂಡಿ ದ್ದಾರೆ.