Sunday, 15th December 2024

ಕೃಷಿ ಭವನದ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಶೋಭಾ ಕರಂದ್ಲಾಜೆ

ನವದೆಹಲಿ : ಕೇಂದ್ರ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವರಾಗಿ ಉಡುಪಿ – ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯರಾದ ಶೋಭಾ ಕರಂದ್ಲಾಜೆ ನವದೆಹಲಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಕಳೆದ ಬುಧವಾರ ಕೇಂದ್ರ ಸಚಿವೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂಸದೆ ಶೋಭಾ ಕರಂದ್ಲಾಜೆಗೆ, ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವೆ ಖಾತೆ ಹಂಚಿಕೆ ಮಾಡಲಾಗಿದೆ. ನವದೆಹಲಿಯ ಕೃಷಿ ಭವನದಲ್ಲಿನ ಕಚೇರಿಯಲ್ಲಿ ಕು.ಶೋಭಾ ಕರಂದ್ಲಾಜೆ ಅಧಿಕಾರ ಸ್ವೀಕರಿಸಿದರು.

ಈ ಬಳಿಕ ಮಾತನಾಡಿ, ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಕೆಲಸ ಮಾಡಿದ ಅನುಭವ ಇದೆ. ಪ್ರಧಾನಿ ಮೋದಿಯವರ ಕನಸು ನನಸು ಮಾಡುತ್ತೇನೆ. ರೈತರ ಹಿತದೃಷ್ಠಿಯಿಂದ ಕೆಲಸ ಮಾಡುತ್ತೇನೆ. ರೈತ ಕೃಷಿ ಕಾನೂನುಗಳ ಬಗ್ಗೆ ಅರಿವು ಮೂಡಿಸುತ್ತೇನೆ ಎಂಬುದಾಗಿ ತಿಳಿಸಿದರು.