Friday, 13th December 2024

ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ರದ್ದಾಗಲಿ: ಸಂಸದ ಸಾಕ್ಷಿ ಹೇಳಿಕೆ ವೈರಲ್‌

ಕಾನ್ಪುರ: ಭಾರತದಲ್ಲಿ ಪಾಕಿಸ್ತಾನಕ್ಕಿಂತ ಹೆಚ್ಚು ಮುಸ್ಲಿಂ ಜನಸಂಖ್ಯೆ ಇದೆ. ಹೀಗಾಗಿ, ಮುಸ್ಲಿಮರ ಅಲ್ಪಸಂಖ್ಯಾತ ಸ್ಥಾನಮಾನ ವನ್ನು ರದ್ದುಗೊಳಿಸಬೇಕು. ಮುಸ್ಲಿಮರು ತಮ್ಮನ್ನು ಹಿಂದೂಗಳ ಕಿರಿಯ ಸಹೋದರರೆಂದು ಪರಿಗಣಿಸಬೇಕು, ದೇಶದಲ್ಲಿ ವಾಸಿಸಬೇಕು ಎಂದು ಉನ್ನಾವೊದ ಬಿಜೆಪಿ ಸಂಸದ ಸಾಕ್ಷಿ ಮಹಾರಾಜ್ ನೀಡಿರುವ ಹೇಳಿಕೆ ಭಾರೀ ಸದ್ದು ಮಾಡುತ್ತಿದೆ.

ಉನ್ನಾವೊದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ, ಹೆಚ್ಚುತ್ತಿರುವ ಜನಸಂಖ್ಯೆಯನ್ನು ಪರೀಕ್ಷಿಸಲು ಶೀಘ್ರದಲ್ಲೇ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು. ಎರಡು ಮಕ್ಕಳಿಗಿಂತ ಹೆಚ್ಚು ಮಕ್ಕಳನ್ನು ಹೊಂದಿರುವವರು ಚುನಾವಣೆ ಯಲ್ಲಿ ಸ್ಪರ್ಧಿಸುವುದರಿಂದ ವಂಚಿತರಾಗುತ್ತಾರೆ ಎಂದು ಹೇಳಿದರು.

ವಿನಾಕಾರಣ ರೈತರ ದಿಕ್ಕು ತಪ್ಪಿಸುವ ಯತ್ನಗಳು ನಡೆಯುತ್ತಿವೆ. ಕೃಷಿ ಕಾನೂನುಗಳ ಬಗ್ಗೆ ಮಾತನಾಡಲು ಸರ್ಕಾರ ಸಿದ್ಧವಾಗಿ ದ್ದರೂ ಕೇಳಲು ರೈತರು ಮನಸ್ಸು ಮಾಡುತ್ತಿಲ್ಲ ಎಂದರು.