Wednesday, 11th December 2024

4-1 ಅಂತರದ ಹೀನಾಯ ಸೋಲುಂಡ ಮಿಥಾಲಿ ಪಡೆ, ಹರಿಣಗಳಿಗೆ ಸರಣಿ

ಲಖನೌ: ಯುವ ಆಟಗಾರ್ತಿಯರ ವೈಫಲ್ಯಕ್ಕೆ ಬೆಲೆ ತೆತ್ತ ಭಾರತ ಮಹಿಳಾ ತಂಡ ಅಂತಿಮ ಏಕದಿನ ಪಂದ್ಯದಲ್ಲೂ ಪ್ರವಾಸಿ ದಕ್ಷಿಣ ಆಫ್ರಿಕಾ ತಂಡಕ್ಕೆ ಶರಣಾಯಿತು.

ಅಟಲ್ ಬಿಹಾರಿ ವಾಜಪೇಯಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮಿಥಾಲಿ ರಾಜ್ ಪಡೆ 5 ವಿಕೆಟ್‌ಗಳಿಂದ ಶರಣಾಯಿತು. ಇದರಿಂದ ಭಾರತಕ್ಕೆ ಪ್ರಸಕ್ತ ವರ್ಷದ ಏಕದಿನ ವಿಶ್ವಕಪ್ ಟೂರ್ನಿಗೆ ತಂಡದ ಸಂಯೋಜನೆಗೆ ದೊಡ್ಡ ಹಿನ್ನಡೆಯುಂಟಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಭಾರತ, ನಾಯಕಿ ಮಿಥಾಲಿ ರಾಜ್ (79*ರನ್) ಏಕಾಂಗಿ ನಿರ್ವಹಣೆ ನಡುವೆಯೂ 49.3 ಓವರ್ ‌ಗಳಲ್ಲಿ 188 ರನ್‌ಗಳಿಗೆ ಸರ್ವಪತನ ಕಂಡಿತು. ಪ್ರತಿಯಾಗಿ ದಕ್ಷಿಣ ಆಫ್ರಿಕಾ ತಂಡ 48.2 ಓವರ್‌ಗಳಲ್ಲಿ 5 ವಿಕೆಟ್‌ಗೆ 189 ರನ್‌ಗಳಿಸಿ ಗೆಲುವಿನ ನಗೆ ಬೀರಿತು.

ಭಾರತ ಮಹಿಳಾ ತಂಡ: 49.3 ಓವರ್ ಗಳಲ್ಲಿ 188

ದಕ್ಷಿಣ ಆಫ್ರಿಕಾ ಮಹಿಳಾ ತಂಡ: 48.2 ಓವರ್‌ಗಳಲ್ಲಿ 5 ವಿಕೆಟ್‌ಗೆ 189 

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ