Sunday, 15th December 2024

ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಮರು ಆಯ್ಕೆ

ಚೆನ್ನೈ: ತಮಿಳುನಾಡಿನ ಆಡಳಿತರೂಢ ಡಿಎಂಕೆ ಪಕ್ಷದ ಅಧ್ಯಕ್ಷರಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಅವರು ಅವಿರೋಧವಾಗಿ ಮರು ಆಯ್ಕೆಗೊಂಡಿದ್ದಾರೆ.

ಭಾನುವಾರ ಚೆನ್ನೈನಲ್ಲಿ ನಡೆದ ಸಾಮಾನ್ಯ ಕೌನ್ಸಿಲ್‌ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು.

ಪಕ್ಷದ ನಾಯಕರಾದ ದುರೈಮುರುಗನ್‌ ಅವರು ಮುಖ್ಯ ಕಾರ್ಯದರ್ಶಿಯಾಗಿ ಮತ್ತು ಟಿ.ಆರ್‌. ಬಾಲು ಅವರು ಖಜಾಂಚಿಯಾಗಿ ಅವಿರೋಧವಾಗಿ ಆಯ್ಕೆಗೊಂಡರು. ಇದರೊಂದಿಗೆ ಸ್ಟಾಲಿನ್‌ ಸೇರಿ ಮೂವರು ಎರಡನೇ ಬಾರಿಗೆ ಪಕ್ಷದ ಉನ್ನತ ಸ್ಥಾನಗಳಿಗೆ ಆಯ್ಕೆಗೊಂಡಂತಾಗಿದೆ.

ಕರುಣಾನಿಧಿ ಅವರು ಮೃತರಾದ ಬಳಿಕ 2018ರಲ್ಲಿ ಸ್ಟಾಲಿನ್‌ ಅವಿರೋಧವಾಗಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡಿದ್ದರು.