Wednesday, 11th December 2024

ಅಬಕಾರಿ ನೀತಿ ಹಗರಣ ಪ್ರಕರಣ: ಎಂಎಲ್‌ಸಿ ಕೆ.ಕವಿತಾ ವಿಚಾರಣೆ ಇಂದು

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ಕೆಸಿಆರ್ ಪುತ್ರಿ, ತೆಲಂಗಾಣ ರಾಷ್ಟ್ರ ಸಮಿತಿ ಎಂಎಲ್‌ಸಿ ಕೆ.ಕವಿತಾ ಅವರನ್ನು ಕೇಂದ್ರ ತನಿಖಾ ದಳ ಭಾನುವಾರ ವಿಚಾರಣೆ ನಡೆಸಲಿದೆ.

ಈ ಹಿನ್ನೆಲೆಯಲ್ಲಿ ಕವಿತಾ ಅವರ ನಿವಾಸದ ಬಳಿ ಭದ್ರತೆ ಹೆಚ್ಚಿಸಲಾಗಿದೆ. ಕವಿತಾ ನಿವಾಸದ ಬಳಿ ಪೊಲೀಸರು ಬ್ಯಾರಿಕೇಡ್‌ ಗಳನ್ನು ಹಾಕಿದ್ದಾರೆ.

ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ಕವಿತಾ ಅವರ ನಿವಾಸದಲ್ಲಿ ವಿಚಾರಣೆ ನಡೆಯಲಿದೆ.