ನವದೆಹಲಿ: ಶಾಸಕ ಜಮೀರ್ ಅಹ್ಮದ್ ದೆಹಲಿಯ ಇಡಿ ಕಚೇರಿಗೆ ಶುಕ್ರವಾರ ವಿಚಾರಣೆಗೆ ಹಾಜರಾಗಿ ದ್ದಾರೆ.
ಜಾರಿ ನಿರ್ದೇಶನಾಲಯ ಅಧಿಕಾರಿಗಳ ಸೂಚನೆ ಹಿನ್ನೆಲೆಯಲ್ಲಿ ಹಾಜರಾಗಿದ್ದೇನೆ. ಇಡಿ ಅಧಿಕಾರಿಗಳು ದೂರವಾಣಿ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಹಾಜರಾಗಿ ದ್ದೇನೆ. ಈ ಹಿಂದೆ ಹೇಳಿಕೆಗಳನ್ನು ದಾಖಲಿಸಿ, ಅಗತ್ಯ ದಾಖಲೆಗಳನ್ನು ಕೂಡ ಸಲ್ಲಿಸಿದ್ದೆ. ಇದೀಗ ಸ್ಪಷ್ಟನೆ ನಿಟ್ಟಿನಲ್ಲಿ ಇಡಿ ಕಚೇರಿಗೆ ಆಗಮಿಸಿದ್ದೇನೆ ಎಂದು ತಿಳಿಸಿದರು.
ಕಳೆದ ತಿಂಗಳು ಇಡಿ ಅಧಿಕಾರಿಗಳು ಶಾಸಕರ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದರು.