Friday, 22nd November 2024

ಹಾಸ್ಟೆಲ್‌ ಎಂಎಂಎಸ್‌ ವೈರಲ್: ವಿದ್ಯಾರ್ಥಿನಿಯರ ಆತ್ಮಹತ್ಯೆ

ಚಂಡೀಗಢ: ಚಂಡೀಗಢ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಹಾಸ್ಟೆಲ್‌ ಎಂಎಂಎಸ್‌ ಒಂದು ವೈರಲ್ ಆಗಿ  ಹಾಸ್ಟೆಲ್‌ ನಲ್ಲಿದ್ದ ನಾಲ್ವರು ವಿದ್ಯಾರ್ಥಿನಿ ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವಿದ್ಯಾರ್ಥಿನಿಯರ ಹಾಸ್ಟೆಲ್‌ನ ಹಲವು ವಿದ್ಯರ್ಥಿನಿಯರ ಎಂಎಂಎಸ್ ವೈರಲ್ ಆಗಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿ ಯೊಬ್ಬರು ವಿಡಿಯೋ ರೆಕಾರ್ಡ್‌ ಮಾಡಿ ಆಕೆಯ ಬಾಯ್‌ಫ್ರೆಂಡ್‌ಗೆ ಕಳಿಸಿದ್ದಳು. ಈ ಮೂಲಕ ಎಂಎಂಎಸ್ ಹಲವು ಕಡೆ ಹರಿದಾಡಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ನಾಲ್ವರು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹಾಸ್ಟೆಲ್ ವಿದ್ಯಾರ್ಥಿನಿಯರು ಈ ಕುರಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವಿಡಿಯೋ, ಫೋಟೋಗಳನ್ನು ಶೇರ್ ಮಾಡಿದ್ದಾಳೆ ಎನ್ನಲಾದ ವಿದ್ಯಾರ್ಥಿನಿಯನ್ನು ವಶಕ್ಕೆ ಪಡೆಯಲಾಗಿದೆ.

ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಪ್ರಯತ್ನ ನಡೆಸಿದ್ದಾರೆ ಎಂಬ ವರದಿಗಳನ್ನು ಪೊಲೀಸರು ಮತ್ತು ವಿಶ್ವವಿದ್ಯಾಲಯ ತಳ್ಳಿ ಹಾಕಿದೆ.  ಈ ಪ್ರಕರಣದ ಕುರಿತು ಸೈಬರ್ ಕ್ರೈಂ ಪೊಲೀಸರಿಗೆ ಸಹ ಮಾಹಿತಿ ನೀಡಲಾಗಿದೆ. ಮೊಹಾಲಿ ಪೊಲೀಸರು ಸಹ ಎಫ್‌ಐಆರ್ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

ಶಿಕ್ಷಣ ಸಚಿವ ಹರ್ಜೋತ್ ಸಿಂಗ್, “ಇದು ಸೂಕ್ಷ್ಮವಾದ ವಿಚಾರವಾಗಿದೆ. ನಮ್ಮ ಸಹೋ ದರಿಯರು ಮತ್ತು ಮಕ್ಕಳ ಗೌರವದ ಪ್ರಶ್ನೆಯಾಗಿದೆ. ಮಾಧ್ಯಮದವರು ಸೇರಿ ಎಲ್ಲರೂ ಎಚ್ಚರವಾಗಿರಬೇಕು” ಎಂದು ಕರೆ ನೀಡಿದ್ದಾರೆ.

ವಿಡಿಯೋ ಕಳಿಸಿದ ವಿದ್ಯಾರ್ಥಿನಿ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ವಿದ್ಯಾರ್ಥಿನಿ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.