Sunday, 15th December 2024

ಗೃಹ ಸಚಿವ ಅನಿಲ್ ದೇಶ್’ಮುಖ್ ರಾಜೀನಾಮೆಗೆ ಎಂಎನ್‌ಎಸ್‌ ಆಗ್ರಹ

ನವದೆಹಲಿ: ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ ಮುಖ್ ವಿರುದ್ಧ ಗಂಭೀರ ಭ್ರಷ್ಟಾಚಾರ ಆರೋಪ ಕೇಳಿ ಬಂದಿದ್ದು, ಕೂಡಲೇ ರಾಜೀನಾಮೆ ನೀಡಬೇಕೆಂದು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನಾ ಆಗ್ರಹಿಸಿದೆ.

ಎಂಎನ್‌ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಮಾತನಾಡಿ, ಅನಿಲ್ ದೇಶ್ ಮುಖ್ ಅವರು ಕೂಡಲೇ ರಾಜೀನಾಮೆ ನೀಡಬೇಕು. ಉದ್ಯಮಿ ಯೊಬ್ಬರ ನಿವಾಸದ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆಯಾಗಿರುವುದು ಗಂಭೀರವಾದ ವಿಚಾರ. ಪ್ರಕರಣ ಸಂಬಂಧ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಪ್ರಕರಣ ಗಂಭೀರವಾಗಿರುವುದರಿಂದ ರಾಜ್ಯ ಸರ್ಕಾರ ಈ ಪ್ರಕರಣ ತನಿಖೆ ನಡೆಸುವುದು ಸರಿಯಲ್ಲ ಎಂದು ತಿಳಿಸಿದ್ದಾರೆ.

ಮುಂಬೈನ ಖಾಸಗಿ ಹೋಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂಸದ ಮೋಹನ್ ದೇಲ್ಕರ್ ಸಾವಿಗೂ ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್ ದೇಶ್ ಮುಖ್ ಅವರ ಹೆಸರು ಥಳುಕು ಹಾಕಿಕೊಂಡಿದೆ.

ಪ್ರಕರಣ ಸಂಬಂಧ ಕರ್ತವ್ಯದಿಂದ ಅಮಾನತಾಗಿರುವ ಎಎಸ್‌ಐ ಸಚಿನ್ ವಾಜೆ ಬಳಿ ಮಹಾರಾಷ್ಟ್ರ ಗೃಹ ಮಂತ್ರಿ ಅನಿಲ್ ದೇಶ್ ಮುಖ್, ಬಾರ್ ಹಾಗೂ ರೆಸ್ಟೋರೆಂಟ್ ಗಳಿಂದ ಪ್ರತಿ ತಿಂಗಳು ರೂ.100 ಕೋಟಿ ಹಣ ವಸೂಲಿ ಮಾಡುವಂತೆ ಒತ್ತಡ ಹೇರಿದ್ದರು ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಬರೆದ ಪತ್ರದಲ್ಲಿ ಆರೋಪಿಸಿದ್ದರು.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್‌ ಬುಕ್‌ ಪೇಜ್‌ ಲೈಕ್‌ ಮಾಡಿ

https://www.facebook.com/Vishwavanidaily