ಕೋಲ್ಕತಾ: ಬಾಂಗ್ಲಾದೇಶ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಶನಿವಾರ ಹೇಳಿದ್ದಾರೆ.
ಚುನಾವಣೆ ನಡೆಯುವ ಸಂದರ್ಭದಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶಕ್ಕೆ ಹೋಗಿ ಬಂಗಾಳದ ಬಗ್ಗೆ ಭಾಷಣ ಮಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಮಾಟುವಾಸ್ ರನ್ನು ಆಕರ್ಷಿಸುವ ಪ್ರಯತ್ನದಲ್ಲಿ, ಪ್ರಧಾನಿ ಮೋದಿ ಅವರು ಬಾಂಗ್ಲಾದೇಶದ ಅವರ ಅತ್ಯಂತ ಪವಿತ್ರ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಇದೇ ಮೊದಲ ಬಾರಿಗೆ ಒಬ್ಬ ನಾಯಕ ತನ್ನ ಪಕ್ಷದ ಮತ ಬ್ಯಾಂಕ್ ಅನ್ನು ಭದ್ರಪಡಿಸಿಕೊಳ್ಳಲು ವಿದೇಶಿ ನೆಲವನ್ನು ಬಳಸಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ.
ಪಶ್ಚಿಮ ಬಂಗಾಳ ವಿಧಾನಸಭೆಗೆ ಮೊದಲ ಹಂತದ ಮತದಾನ ನಡೆಯುತ್ತಿದೆ.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ