ನವದೆಹಲಿ: ಮೂರು ದಿನಗಳ ಅಮೆರಿಕ ಪ್ರವಾಸ ಮುಗಿಸಿ ಮರಳಿದರೂ, ಪ್ರಧಾನಿ ನರೇಂದ್ರ ಮೋದಿ ಯವರ ಊಟೋಪಚಾರ ಸಹಿತ ಆತಿಥ್ಯದ ನೇತೃತ್ವ ವಹಿಸಿದವರು ಉಡುಪಿ ಜಿಲ್ಲೆಯ ಕುಂದಾಪುರದ ಆಲೂರು ಮೂಲದ ಅನಿವಾಸಿ ಭಾರತೀಯ ಹೋಟೆಲ್ ಉದ್ಯಮಿ ಆನಂದ ಪೂಜಾರಿ.
ಇಂಥದ್ದೊಂದು ಅದೃಷ್ಟ ಆನಂದ ಪೂಜಾರಿ ದಂಪತಿಯದ್ದು. ಪ್ರಧಾನಿ ಮೋದಿಯವರು ಈ ಹಿಂದೆ ಅಮೆರಿಕಕ್ಕೆ ಹೋಗಿದ್ದಾಗಲೂ ಈ ದಂಪತಿ ಆತಿಥ್ಯ ನೀಡಿದ್ದಾರೆ. ಆನಂದ ಪೂಜಾರಿ ಮತ್ತು ಪತ್ನಿ ಸುಮಿತಾ ಯುಎಸ್ ನ ವಾಷಿಂಗ್ಟನ್ ಡಿಸಿಯಲ್ಲಿ ಕಳೆದ ಮೂರು ದಶಕಗಳಿಂದ ನೆಲೆಸಿದ್ದು, ಭವ್ಯ ವುಡ್ ಲ್ಯಾಂಡ್ಸ್ ಹೊಟೇಲ್ ನಡೆಸುತ್ತಿದ್ದಾರೆ. ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವ ಅವಕಾಶವನ್ನು ಈ ದಂಪತಿ ಪಡೆದಿದ್ದಾರೆ.
ಪ್ರಧಾನಿ ಮೋದಿಯವರು ಅಮೆರಿಕದಲ್ಲಿದ್ದರೂ ದಕ್ಷಿಣ ಭಾರತೀಯ ಖಾದ್ಯಗಳಿಗೆ ಮಾರುಹೋಗಿದ್ದಾರೆ ಎನ್ನುತ್ತಾರೆ ಆನಂದ ಪೂಜಾರಿ ಅವರು. ಇಡ್ಲಿ, ವಡಾ, ಉಪ್ಪಿಟ್ಟು ಅವರಿಗೆ ಇಷ್ಟ. ದಿನಕ್ಕೆ ನಾಲ್ಕು ಬಾರಿಯಾದರೂ ಮಸಾಲಾ ಟೀ ಕುಡಿಯುತ್ತಾರೆ ಎನ್ನುತ್ತಾರೆ ಆನಂದ್ ದಂಪತಿ.
ಬೈಂದೂರು ತಾಲೂಕಿನ ಆಲೂರು ಗ್ರಾಮದ ಕಲ್ಲಂಗಡಿ ಮನೆಯ ನಿವಾಸಿ ಬಡಿಯ ಪೂಜಾರಿ ಹಾಗೂ ಗಿರಿಜಾ ದಂಪತಿಯ ಪುತ್ರ.