ನವದೆಹಲಿ: ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಉದ್ಘಾಟನೆಗೆ ಉತ್ತರ ಪ್ರದೇಶದ ವಾರಣಾಸಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಗಂಗಾನದಿ ಯಲ್ಲಿ ಪುಣ್ಯಸ್ನಾನ ಮಾಡಿದರು. ರುದ್ರಾಕ್ಷಿ ಹಿಡಿದು ಕೆಲಕಾಲ ಜಪ ಮಾಡುವ ಮೂಲಕ ಗಮನ ಸೆಳೆದರು.
ಆಗ ದೇವಸ್ಥಾನದ ಅರ್ಚಕರು ಮೋದಿಗೆ ದೃಷ್ಟಿ ನಿವಾರಣೆ ಮಾಡಿದ್ದಾರೆ. ಕಾಲಭೈರವೇಶ್ವರ ದೇವರಿಗೆ ವಿಶೇಷ ಪೂಜೆಯನ್ನು ಮೋದಿ ಸಲ್ಲಿಸಿದ್ದಾರೆ. ಹೂವಿನ ಮಾಲೆ ಹಾಕಿ ಆರತಿ ಬೆಳಗಿ ಮೋದಿ ತಲೆ ಬಾಗಿ ನಮಸ್ಕರಿಸಿದ್ದಾರೆ. ಈ ವೇಳೆ ದೇವಸ್ಥಾನದ ಅರ್ಚಕರು ಮೋದಿ ಅವರ ಹಣೆಗೆ ತಿಲಕ ಇಟ್ಟು ಆಶಿರ್ವ ದಿಸಿದ್ದಾರೆ.
ಮೋದಿ ಅವರ ಈ ವಿಶೇಷ ಪೂಜೆಯಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಜೊತೆಯಾಗಿದ್ದರು. ಸುಮಾರು 900 ಕೋಟಿ.ರೂ ವೆಚ್ಚದಲ್ಲಿ ನಿರ್ಮಿಸಲಾದ ಶ್ರೀ ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆಯ ಮೊದಲ ಹಂತಕ್ಕೆ ಚಾಲನೆ ನೀಡಲಿದ್ದಾರೆ.
ಕಾಶಿ ವಿಶ್ವನಾಥ ಕಾರಿಡಾರ್ ಯೋಜನೆ ಮೋದಿಯವರ ಕನಸಿನ ಯೋಜನೆ ಯಾಗಿದ್ದು, ಸುಮಾರು 5 ಸಾವಿರ ಚದರಿ ಅಡಿ ಪ್ರದೇಶಕ್ಕೆ ದೇಗುಲ ವ್ಯಾಪ್ತಿ ವಿಸ್ತಾರವಾಗಿದೆ. ಕಾರಿಡಾರ್ 320 ಮೀಟರ್ ಉದ್ದ ಮತ್ತು 20 ಮೀಓಟರ್ ಅಗಲ ಇದೆ. ಮೊದಲಿನಂತೆ ಕಿಕ್ಕಿರಿದ ರಸ್ತೆಗಳ ಬದಲಾಗಿ ಇದೀಗ ಸರಾಗವಾಗಿ ಕೇವಲ ಒಂದು ನಿಮಿಷದಲ್ಲಿ ದೇಗುಲದಿಂದ ಲಲಿತಾಘಾಟ್ಗೆ ತಲುಪಬಹುದಾಗಿದೆ.