Wednesday, 11th December 2024

ಹೋಮಿಬಾಬಾ ಕ್ಯಾನ್ಸರ್ ಆಸ್ಪತ್ರೆ, ಸಂಶೋಧನಾ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಮೊಹಾಲಿ: ಪಂಜಾಬ್‌ನ ಮೋಹಾಲಿ ಜಿಲ್ಲೆಯಲ್ಲಿ ಅತ್ಯಾಧುನಿಕ ಸೌಲಭ್ಯ ಗಳೊಂದಿಗೆ ನಿರ್ಮಾಣವಾಗಿರುವ ಮುಲ್ಲಾನಪುರ್ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯನ್ನು ಬುಧವಾರ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿ ದರು.

300 ಬೆಡ್‌ಗಳ ಈ ವಿಶೇಷ ಕ್ಯಾನ್ಸರ್ ಆಸ್ಪತ್ರೆಯನ್ನು ಕೇಂದ್ರ ಅಣುಶಕ್ತಿ ಸಂಸ್ಥೆ, ಟಾಟಾ ಮೆಮೋರಿಯಲ್ ಸೆಂಟರ್ ಸಹಯೋಗ ದಲ್ಲಿ ನಿರ್ಮಾಣ ಮಾಡಲಾ ಗಿದೆ. ಈ ಆಸ್ಪತ್ರೆಯನ್ನು ಬರೋಬ್ಬರಿ ₹ 660 ಕೋಟಿ ವೆಚ್ಚದಲ್ಲಿ ಕಟ್ಟಲಾಗಿದೆ.

ಮುಲ್ಲಾನಪುರ್ ಹೋಮಿ ಬಾಬಾ ಕ್ಯಾನ್ಸರ್ ಆಸ್ಪತ್ರೆ ಹಾಗೂ ಸಂಶೋಧನಾ ಸಂಸ್ಥೆಯಲ್ಲಿ ಮಮ್ಮೊಗ್ರಫಿ, ಅತ್ಯಾಧುನಿಕ ಎಂಆರ್‌ಐ, ಡಿಜಿಟಲ್ ರೆಡಿಯೋಗ್ರಫಿ, ಡಿಜಿಟಲ್ ಬ್ರಾಚಿಥೆರಫಿ ಮೂಲಕ ಎಲ್ಲ ತರದ ಕ್ಯಾನ್ಸರ್‌ಗಳಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ ಆಸ್ಪತ್ರೆ ಕೇವಲ ಪಂಜಾಬ್ ಅಲ್ಲದೇ, ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ರಾಜಸ್ಥಾನ, ಹಿಮಾಚಲ ಪ್ರದೇಶ, ಉತ್ತರಾಖಂಡದ ರಾಜ್ಯಗಳ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗಲಿದೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಉಪಸ್ಥಿತ ರಿದ್ದರು.

ಇದಕ್ಕೂ ಮುನ್ನ ಹರಿಯಾಣದ ಫರಿದಾಬಾದ್‌ನಲ್ಲಿ 2,600 ಹಾಸಿಗೆಗಳ ಅಮೃತ ಆಸ್ಪತ್ರೆ ಬುಧವಾರ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ದೇಶದಲ್ಲಿ ಆರೋಗ್ಯ ಮತ್ತು ಆಧ್ಯಾತ್ಮ ಒಂದಕ್ಕೊಂದು ನಿಕಟ ಸಂಬಂಧ ಹೊಂದಿದೆ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಮಾತಾ ಅಮೃತಾನಂದಮಯಿ, ಹರಿಯಾಣ ರಾಜ್ಯಪಾಲ ಬಂಡಾರು ದತ್ತಾತ್ರೇಯ ಮತ್ತು ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಉಪಸ್ಥಿತರಿದ್ದರು.