Tuesday, 19th November 2024

Modi-Meloni Visit: ಬ್ರೆಜಿಲ್‌ನಲ್ಲಿ ನರೇಂದ್ರ ಮೋದಿ -ಜಾರ್ಜಿಯಾ ಮೆಲೋನಿ ಭೇಟಿ

Modi Brazil Visit

ಬ್ರೆಜಿಲ್‌: ಕಳೆದೆರಡು ದಿನಗಳಿಂದ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ(PM Narendra Modi) ಬ್ರೆಜಿಲ್‌ನಲ್ಲಿ ನಡೆದ ಜಿ-20 ಶೃಂಗಸಭೆ(Brazil G-20)ಯಲ್ಲಿ ಭಾಗವಹಿಸಿದ್ದರು. ಈ ವೇಳೆ ಅವರು ಇಟಲಿ ಪ್ರಧಾನಿ ಮೆಲೋನಿಯವರನ್ನು ಭೇಟಿ(Modi-Meloni Visit)ಯಾದರು. ಈ ಶೃಂಗಸಭೆಯಲ್ಲಿ ಬ್ರೆಜಿಲ್, ಸಿಂಗಾಪುರ, ಬ್ರಿಟನ್, ಇಟಲಿ, ಫ್ರಾನ್ಸ್, ಇಂಡೋನೇಷ್ಯಾ ಸೇರಿದಂತೆ ಹಲವು ಜಾಗತಿಕ ನಾಯಕರ ಜತೆ ಮಾತುಕತೆ ನಡೆಸಿದರು.

ಪ್ರಧಾನಿ ಮೋದಿ ಅವರ ಭೇಟಿಯನ್ನು ತಮ್ಮ ಎಕ್ಸ್‌ ಖಾತೆಯಲ್ಲೂ ಹಂಚಿಕೊಂಡಿರುವ ಜಾರ್ಜಿಯಾ ಮೆಲೋನಿ, ಭಾರತದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಯಾವಾಗಲೂ ಖುಷಿಯಾಗುತ್ತದೆ ಎಂದು ಹೇಳಿದ್ದಾರೆ. ಇತ್ತ ಮೋದಿ ಕೂಡ ಇಟಲಿ ಭಾಷೆಯಲ್ಲಿಯೇ ಎಕ್ಸ್‌ ಪೋಸ್ಟ್‌ ಮಾಡಿದ್ದಾರೆ. ಉಭಯ ನಾಯಕರು ಜಿ20 ಶೃಂಗಸಭೆ ವೇಳೆ ವ್ಯಾಪಾರ, ಹೂಡಿಕೆ, ವಿಜ್ಞಾನ ಮತ್ತು ತಂತ್ರಜ್ಞಾನ, ಇಂಧನ, ಬಾಹ್ಯಾಕಾಶ ಹಾಗೂ ರಕ್ಷಣೆ ವಿಚಾರಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಹಕಾರದ ಬಗ್ಗೆ ಮಾತನಾಡಿದ್ದಾರೆ.

ರಿಯೊ ಡಿ ಜನೈರೊದಲ್ಲಿನ ಮ್ಯೂಸಿಯಂ ಆಫ್ ಮಾಡರ್ನ್ ಆರ್ಟ್‌ನಲ್ಲಿ ಎರಡು ದಿನಗಳ ಶೃಂಗಸಭೆಯಲ್ಲಿ ಯುಎಸ್ ಅಧ್ಯಕ್ಷ ಜೋ ಬೈಡನ್, ಪಿಎಂ ಮೋದಿ, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಬ್ರಿಟಿಷ್ ಪ್ರಧಾನಿ ಕೀರ್ ಸ್ಟಾರ್ಮರ್ ಸೇರಿದಂತೆ ಇತರ ನಾಯಕರು ಭಾಗವಹಿಸಿದ್ದರು.ಇದಲ್ಲದೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಉಭಯ ದೇಶಗಳ ನಡುವಿನ ರಕ್ಷಣೆ, ಭದ್ರತೆ ಮತ್ತಿತರ ಸಂಬಂಧಗಳ ಬಲವರ್ಧನೆ ಕುರಿತು ಚರ್ಚಿಸಲಾಯಿತು.

ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ತಮ್ಮ ಅಧಿಕೃತ ಎಕ್ಸ್ (ಹಿಂದಿನ ಟ್ವಿಟರ್) ಹ್ಯಾಂಡಲ್‌ನಲ್ಲಿ ಕೆಲವು ಚಿತ್ರಗಳನ್ನು ಪ್ರಧಾನಿ ಮೋದಿ ಹಂಚಿಕೊಂಡಿದ್ದಾರೆ. ಇದಕ್ಕೂ ಮುನ್ನ ಬ್ರೆಜಿಲ್‌ನಲ್ಲಿ ಜಿ20 ನಾಯಕರ ಶೃಂಗಸಭೆಯ ಸಂದರ್ಭದಲ್ಲಿ ಪ್ರಧಾನಿ ಮೋದಿ ಇಂಡೋನೇಷ್ಯಾ ಮತ್ತು ಪೋರ್ಚುಗಲ್‌ನ ನಾಯಕರನ್ನು ಭೇಟಿಯಾದರು. ಪ್ರಧಾನಿ ಮೋದಿ ಅವರು ವಾಣಿಜ್ಯ ಮತ್ತು ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಎರಡೂ ರಾಷ್ಟ್ರಗಳೊಂದಿಗೆ ಬಾಂಧವ್ಯವನ್ನು ಬಲಪಡಿಸಲು ಒತ್ತು ನೀಡಿದರು.

ಈ ಸುದ್ದಿಯನ್ನು ಓದಿ: ಬ್ರೆಜಿಲ್‌ ವಿಮಾನ ನಿಲ್ದಾಣದಲ್ಲಿ ಅಶ್ಲೀಲ ಚಲನಚಿತ್ರ ಪ್ರದರ್ಶನ..!