Sunday, 15th December 2024

ಇಂದು ಅಂಜಾರ್, ಗೋರ್ಧನ್‌ಪುರ, ಪಾಲಿಟಾನಾ, ಜಾಮ್‌ನಗರದಲ್ಲಿ ಮೋದಿ ರ‍್ಯಾಲಿ

ಗಾಂಧಿನಗರ (ಗುಜರಾತ್): ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ, ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಪಾಲ್ಗೊಳ್ಳ ಲಿದ್ದು, ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಚ್‌ನ ಅಂಜಾರ್, ಜಾಮ್‌ನಗರದ ಗೋರ್ಧನ್‌ಪುರ, ಭಾವನಗರದ ಪಾಲಿಟಾನಾ, ಜಾಮ್‌ನಗರದ ಗೋರ್ಧನ್‌ಪರ್ ಮತ್ತು ರಾಜ್‌ಕೋಟ್‌ನಲ್ಲಿ ಮೋದಿ ಅವರು ರ್ಯಾಲಿ ಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಗುಜರಾತ್ ವಿಧಾನಸಭಾ ಚುನಾವಣೆಯ ಮೊದಲ ಹಂತ ಮುಕ್ತಾಯದ ಹಂತಕ್ಕೆ ಬರುತ್ತಿದ್ದಂತೆ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ಪಕ್ಷಗಳು ತಮ್ಮ ಭಾರಿ ಮುಂಚೂಣಿಯಲ್ಲಿವೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೂಡ ಖೇರಾಲು, ಸಾವ್ಲಿ, ಭಿಲೋಡಾ ಮತ್ತು ನಾರಣಪುರದಲ್ಲಿ ಸಾರ್ವಜನಿಕ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಭಾಯ್ ಪಟೇಲ್, ಅಸ್ಸಾಂ ಮುಖ್ಯಮಂತ್ರಿ ಹೇಮಂತ ಬಿಸ್ವಾ ಶರ್ಮಾ, ಕೇಂದ್ರ ಸಚಿವರಾದ ಸ್ಮೃತಿ ಇರಾನಿ ಮತ್ತು ಪುರುಸೊತ್ತಮ್ ರೂಪಾಲಾ ಮತ್ತು ಅನೇಕ ಹಿರಿಯ ಬಿಜೆಪಿ ನಾಯಕರು ವಿವಿಧ ಸ್ಥಳಗಳಲ್ಲಿ ಸಾರ್ವಜನಿಕ ಸಭೆಗಳು ಮತ್ತು ರೋಡ್ ಶೋಗಳನ್ನು ನಡೆಸಲಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಅಹಮದಾಬಾದ್‌ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದು, ಮೆಹ್ಸಾನಾ ಮತ್ತು ಅಹಮದಾಬಾದ್‌ನಲ್ಲಿ ಚುನಾವಣಾ ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕೂಡ ಪಕ್ಷದ ಪರ ಪ್ರಚಾರ ನಡೆಸಲಿದ್ದಾರೆ.