ನವದೆಹಲಿ: ಉಕ್ರೇನ್ ನ ಯುದ್ಧ ಭೂಮಿಯಲ್ಲಿ ರಷ್ಯಾ ದಾಳಿಯ ನಂತ್ರ ಸಿಲುಕಿದ್ದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತ ವಾಗಿ ಸ್ಥಳಾಂತರಿಸಲು ಸಹಕರಿಸಿದ ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ, ಧನ್ಯವಾದ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮೈರ್ ಝೆಲೆನ್ಸ್ಕಿ ಅವರೊಂದಿಗೆ ದೂರವಾಣಿಯಲ್ಲಿ ಸುಮಾರು 35 ನಿಮಿಷಗಳ ಕಾಲ ಮಾತ ನಾಡಿದ್ದಾರೆ.
ಇಬ್ಬರೂ ನಾಯಕರು ಉಕ್ರೇನ್ ನಲ್ಲಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಚರ್ಚಿಸಿದರು. ರಷ್ಯಾ ಮತ್ತು ಉಕ್ರೇನ್ ನಡುವೆ ನೇರ ಮಾತುಕತೆ ಮುಂದುವರಿದಿರುವ ಬಗ್ಗೆ ಪ್ರಧಾನಿ ಮೆಚ್ಚುಗೆ ವ್ಯಕ್ತಪಡಿಸಿದರು.