Wednesday, 11th December 2024

ಜು.13ರಂದು ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಪ್ರಧಾನಿ ಮೋದಿ ಸಂವಾದ

narendra Modi

ನವದೆಹಲಿ: ಜಪಾನ್‌ನ ಟೋಕಿಯೊದಲ್ಲಿ ಈ ಬಾರಿಯ ಒಲಿಂಪಿಕ್ಸ್‌ ಕ್ರೀಡಾ ಕೂಟದಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಥ್ಲೀಟ್‌ ಕ್ರೀಡಾಪಟುಗಳೊಂದಿಗೆ ಜು.13ರಂದು ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಲಿದ್ದಾರೆ.

ಮೂರು ದಿನಗಳ ಮೊದಲೇ ಮೊದಲ ಬ್ಯಾಚ್‌ ಅಥ್ಲೀಟ್‌ಗಳೊಂದಿಗೆ ಮೋದಿ ಸಂವಾದ ನಡೆಸಲಿದ್ದಾರೆ. ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವರ್ಚುವಲ್‌ ಆಗಿ ಸಂವಾದವನ್ನು ಆಯೋಜಿಸಲಾಗಿದೆ. ಟೋಕಿಯೊದ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳಲು ತೆರಳುವ ಕ್ರೀಡಾಪಟುಗಳಿಗೆ ಶುಭ ಹಾರೈಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು, ಕ್ರೀಡಾಪಟುಗಳೊಂದಿಗೆ ಸಂವಾದ ನಡೆಸಲಿದ್ದಾರೆ.

ಭಾರತದ ಒಲಿಂಪಿಕ್ಸ್‌ ಕ್ರೀಡಾಪಟುಗಳ ಮೊದಲ ಬ್ಯಾಚ್ ಚಾರ್ಟರ್ ಏರ್ ಇಂಡಿಯಾ ವಿಮಾನದಲ್ಲಿ ಟೋಕಿಯೊಗೆ ತೆರಳಲಿದೆ. ಈ ಕ್ರೀಡಾಕೂಟದಲ್ಲಿ ಭಾರತದ 120ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುವ ಸಾಧ್ಯತೆ ಇದೆ. ಕೋವಿಡ್‌-19 ಸಾಂಕ್ರಾಮಿಕದ ಕಾರಣದಿಂದಾಗಿ, ಪ್ರೇಕ್ಷಕರಿಲ್ಲದೇ ಒಲಿಂಪಿಕ್ಸ್‌ ಕ್ರೀಡಾಕೂಟ ನಡೆಸಲಾಗುತ್ತಿದೆ.