Friday, 13th December 2024

ಮಾಜಿ ಉಪಪ್ರಧಾನಿಗೆ 94ರ ಹರೆಯ: ಅಭಿನಂದಿಸಿದ ಮೋದಿ ಟೀಂ

ನವದೆಹಲಿ: 94 ನೇ ವರ್ಷಕ್ಕೆ ಕಾಲಿಟ್ಟ ಮಾಜಿ ಉಪಪ್ರಧಾನಿ ಎಲ್ ಕೆ ಅಡ್ವಾಣಿಯ ವರನ್ನು ಸೋಮವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಇತರ ಅನೇಕ ನಾಯಕರು ಅವರನ್ನು ಅಭಿನಂದಿಸಿದರು.

‘ಗೌರವಾನ್ವಿತ ಅಡ್ವಾಣಿ ಅವರಿಗೆ ಜನ್ಮದಿನದ ಶುಭಾಶಯಗಳು. ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ಪ್ರಾರ್ಥಿಸು ತ್ತೇನೆ. ಜನರನ್ನು ಸಬಲೀಕರಣಗೊಳಿಸುವ ಮತ್ತು ನಮ್ಮ ಸಾಂಸ್ಕೃತಿಕ ಹೆಮ್ಮೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರ ಹಲವಾರು ಪ್ರಯತ್ನ ಗಳಿಗಾಗಿ ರಾಷ್ಟ್ರವು ಅವರಿಗೆ ಋಣಿಯಾಗಿದೆ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

ಪ್ರಧಾನಿ ಮೋದಿ, ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಕೂಡ ಅಡ್ವಾಣಿ ಅವರ ನಿವಾಸಕ್ಕೆ ಭೇಟಿ ನೀಡಿ ಹುಟ್ಟುಹಬ್ಬದ ಶುಭಾಶಯ ಕೋರಿ ದರು.

ರಕ್ಷಣಾ ಸಚಿವ ರಾಜನಾಥ್ ಸಿಂಗ್, ಅಡ್ವಾಣಿ ಅವರನ್ನು ಸ್ಫೂರ್ತಿ ಮತ್ತು ಮಾರ್ಗದರ್ಶಕ ಎಂದು ಶ್ಲಾಘಿಸಿದರು ಮತ್ತು ಅವರ ಪಾಂಡಿತ್ಯ, ದೂರದೃಷ್ಟಿ ಮತ್ತು ಬುದ್ಧಿಶಕ್ತಿಯನ್ನು ಎಲ್ಲರೂ ಒಪ್ಪಿಕೊಳ್ಳುವ ಅತ್ಯಂತ ಗೌರವಾನ್ವಿತ ನಾಯಕರಲ್ಲಿ ಅವರನ್ನು ಪರಿಗಣಿಸಲಾಗಿದೆ ಎಂದು ಹೇಳಿದರು.

ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಹಿರಿಯ ನಾಯಕ ಅಡ್ವಾಣಿ ಅವರು ಪಕ್ಷವನ್ನು ಜನಸಾಮಾನ್ಯರಿಗೆ ಕೊಂಡೊಯ್ದಿದ್ದಾರೆ ಮತ್ತು ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಶ್ಲಾಘಿಸಿದರು.