Friday, 22nd November 2024

ನಾಳೆಯಿಂದ ಪ್ರಧಾನಿ ಮೋದಿ ಜರ್ಮನಿ, ಯುಎಇ ಪ್ರವಾಸ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ನಾಳೆಯಿಂದ ಮೂರು ದಿನಗಳ ಜರ್ಮನಿ ಮತ್ತು ಯುಎಇ ಪ್ರವಾಸ ಕೈಗೊಳ್ಳಲಿದ್ದಾರೆ. ಜೂ.26 ಮತ್ತು 27ರಂದು ಜರ್ಮನಿ ಪ್ರವಾಸದಲ್ಲಿ ಜಿ-7 ಶೃಂಗಸಭೆ ಯಲ್ಲಿ ಭಾಗವಹಿಸುವಿಕೆ ಹಾಗೂ  ಜೂ.28 ರಂದು ಯುಎಇಗೆ ಭೇಟಿ ನೀಡಲಿದ್ದಾರೆ.

ಜಿ-7 ಶೃಂಗಸಭೆಗಾಗಿ ಜರ್ಮನಿಯ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಆಹ್ವಾನದ ಮೇರೆಗೆ ಪ್ರಧಾನಿ ಮೋದಿ ಅಲ್ಲಿನ ಸ್ಕ್ಲೋಸ್ ಎಲ್ಮೌಗೆ ತೆರಳುತ್ತಿದ್ದಾರೆ. ಎರಡು ಅಧಿವೇಶನಗಳಲ್ಲಿ ಪ್ರಧಾನಿ ಮಾತನಾಡುವ ನಿರೀಕ್ಷೆಯಿದೆ. ಪರಿಸರ, ಇಂಧನ, ಹವಾಮಾನ, ಆಹಾರ ಭದ್ರತೆ, ಆರೋಗ್ಯ, ಲಿಂಗ ಸಮಾನತೆ ಮತ್ತು ಪ್ರಜಾಪ್ರಭುತ್ವ ವಿಷಯದ ಬಗ್ಗೆ ಭಾಷಣ ಮಾಡಲಿದ್ದಾರೆ.

ಜಿ-7 ಶೃಂಗಸಭೆಯ ಆಹ್ವಾನವು ಭಾರತ ಮತ್ತು ಜರ್ಮನಿ ನಡುವಿನ ಬಲವಾದ ಮತ್ತು ನಿಕಟ ಪಾಲುದಾರಿಕೆ ಮತ್ತು ಉನ್ನತ ಮಟ್ಟದ ರಾಜಕೀಯ ಸಂಪರ್ಕಗಳ ಸಂಪ್ರದಾ ಯಕ್ಕೆ ಅನುಗುಣವಾಗಿದೆ. ಭೇಟಿಯ ಸಮಯದಲ್ಲಿ, ಶೃಂಗಸಭೆಯ ಬದಿಯಲ್ಲಿ ಜಿ-7 ಮತ್ತು ಅತಿಥಿ ರಾಷ್ಟ್ರಗಳ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ವಿದೇಶಾಂಗ ಕಾರ್ಯದರ್ಶಿ ವಿನಯ್ ಮೋಹನ್ ಕ್ವಾತ್ರಾ, ಭಾರತವಲ್ಲದೆ ಜರ್ಮನಿ ಅರ್ಜೆಂಟೀನಾ, ಇಂಡೋನೇಷ್ಯಾ, ಸೆನೆಗಲ್ ಮತ್ತು ದಕ್ಷಿಣ ಆಫ್ರಿಕಾವನ್ನು ಶೃಂಗಸಭೆಗೆ ಆಹ್ವಾನಿಸಿದೆ. ಸೋಮವಾರ ನಡೆಯ ಲಿರುವ ಜಿ-7 ಶೃಂಗಸಭೆಯಲ್ಲಿ ಎರಡು ಅಧಿವೇಶನಗಳಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ ಎಂದು ಹೇಳಿದ್ದಾರೆ.

ಮೊದಲ ಅಧಿವೇಶನವು ಹವಾಮಾನ, ಶಕ್ತಿ ಮತ್ತು ಆರೋಗ್ಯಕ್ಕೆ ಸಂಬಂಧಿಸಿದೆ ಮತ್ತು ಎರಡನೇ ಅಧಿವೇಶನವು ಆಹಾರ ಭದ್ರತೆ ಮತ್ತು ಲಿಂಗ ಸಮಾನತೆಯ ಮೇಲೆ ಇರುತ್ತದೆ. ಜರ್ಮನಿಯಲ್ಲಿ ನಡೆಯಲಿರುವ ಸಮುದಾಯ ಕಾರ್ಯಕ್ರಮದಲ್ಲಿ ಭಾರತೀಯ ವಲಸಿಗರೊಂದಿಗೆ ಸಂವಾದ ನಡೆಸಲಿದ್ದಾರೆ.

ನಂತರ, ಪ್ರಧಾನಿ ಮೋದಿ 28 ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಪ್ರಯಾಣಿಸಲಿದ್ದು, ಯುಎಇ ಮಾಜಿ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ನಿಧನಕ್ಕೆ ವೈಯಕ್ತಿಕ ಸಂತಾಪ ಸೂಚಿಸಿದ್ದಾರೆ.