Friday, 22nd November 2024

Modi visit to US : ಮೂರು ದಿನಗಳ ಭೇಟಿಗಾಗಿ ಅಮೆರಿಕದಲ್ಲಿ ಇಳಿದ ಪ್ರಧಾನಿ ಮೋದಿ

Modi visit to US

ಪೆನ್ಸಿಲ್ವೇನಿಯಾ (ಅಮೆರಿಕ): ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ಮೂರು ದಿನಗಳ ಅಧಿಕೃತ ಭೇಟಿಗಾಗಿ ಅಮೆರಿಕದಲ್ಲಿ (Modi visit to US) ಇಳಿದಿದ್ದಾರೆ. ಈ ಸಂದರ್ಭದಲ್ಲಿ ಅವರು ಹಲವಾರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ ಮತ್ತು ಕಾರ್ಯತಂತ್ರದ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ನ್ಯೂಯಾರ್ಕ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ನಡೆಯಲಿರುವ ‘ಶೃಂಗಸಭೆ’ಯಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯದ ಮೂಲಗಳು ತಿಳಿಸಿವೆ.

ಶನಿವಾರ ಸಂಜೆ 7.30ಕಕ್ಕೆ (ಭಾರತೀಯ ಸಮಯ) ಅವರು ಅಮೆರಿಕದ ಫಿಲಡೆಲ್ಫಿಯಾ ವಿಮಾನ ನಿಲ್ದಾಣದಲ್ಲಿಇಳಿದಿದ್ದಾರೆ. ಮೂರನೇ ಬಾರಿಗೆ ಪ್ರಧಾನಿಯಾಗಿರುವ ಮೋದಿ ಅವರ ಮೊದಲ ಅಮೆರಿಕ ಭೇಟಿ ಇದಾಗಿದೆ. “ಕ್ವಾಡ್ ಶೃಂಗಸಭೆಗೆ ನನ್ನ ಸಹೋದ್ಯೋಗಿಗಳಾದ ಅಧ್ಯಕ್ಷ ಬೈಡನ್, ಆಸ್ಟ್ರೇಲಿಯಾದ ಪ್ರಧಾನಿ ಅಲ್ಬನೀಸ್ ಮತ್ತು ಜಪಾನ್‌ ಪ್ರಧಾನಿ ಕಿಶಿದಾ ಅವರೊಂದಿಗೆ ಪಾಳ್ಗೊಳ್ಳಲಿದ್ದೇನೆ” ಎಂದು ಪಿಎಂ ಮೋದಿ ನಿರ್ಗಮನ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Narendra Modi in US: 3 ದಿನಗಳ ಪ್ರವಾಸಕ್ಕಾಗಿ ಅಮೆರಿಕಕ್ಕೆ ತೆರಳಿದ ಪ್ರಧಾನಿ ಮೋದಿ; ವಿಶ್ವ ನಾಯಕರೊಂದಿಗೆ ಮಹತ್ವದ ಮಾತುಕತೆ

ಪ್ರಧಾನಿ ಮೋದಿಯವರ ಭೇಟಿಯು ಅಮೆರಿಕ ಮತ್ತು ಭಾರತದ ನಡುವಿನ ದ್ವಿಪಕ್ಷೀಯ ಸಭೆಯೊಂದಿಗೆ ಪ್ರಾರಂಭವಾಗಲಿದೆ. ಅಲ್ಲಿ ಅವರು ಮತ್ತು ಅಧ್ಯಕ್ಷ ಜೋ ಬೈಡೆನ್‌ ಜತೆ ಚರ್ಚಿಸಲಿದ್ದಾರೆ. ಭಾರತ-ಅಮೆರಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವ ವಿಷಯಗಳ ಬಗ್ಗೆ ಚರ್ಚಿಸಲಿದ್ದಾರೆ. ದ್ವಿಪಕ್ಷೀಯ ಸಭೆಯಲ್ಲಿ ಹಲವಾರು ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕುವ ಸಾಧ್ಯತೆಯಿದೆ. ಯುಎಸ್‌ನಿಂದ 31 ಪ್ರಿಡೇಟರ್ ಡ್ರೋನ್‌ಗಳನ್ನು ಖರೀದಿಸಲು ಭಾರತ ಯೋಜಿಸಿದ್ದು, ಬಹು ಶತಕೋಟಿ ಡಾಲರ್ ಒಪ್ಪಂದದ ಬಗ್ಗೆಯೂ ಚರ್ಚೆ ನಡೆಯಲಿದೆ.

ಭಾರತ-ಯುಎಸ್ ಬಾಹ್ಯಾಕಾಶ ಸಹಯೋಗದ ಬಗ್ಗೆಯೂ ಇಲ್ಲಿ ಘೋಷಣೆಗಳಾಗಿವೆ. ಅದರ ಅಡಿಯಲ್ಲಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಆಕ್ಸಿಯಮ್ -4 ಮಿಷನ್‌ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ.

ದ್ವಿಪಕ್ಷೀಯ ಮಾತುಕತೆಯ ನಂತರ, ಪ್ರಧಾನಿ ಮೋದಿ ಅವರು ಬೈಡನ್, ಆಸ್ಟ್ರೇಲಿಯಾದ ಪ್ರಧಾನಿ ಆಂಟನಿಯೊ ಅಲ್ಬನಿಸ್ ಮತ್ತು ಜಪಾನ್ ಪ್ರಧಾನಿ ಫ್ಯೂಮಿಯೊ ಕಿಶಿದಾ ಅವರೊಂದಿಗೆ ಕ್ವಾಡ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.