ರಾಹುಲ್ ಗಾಂಧಿ ಅವರು ಕೂಡ ಡಾ ಮನಮೋಹನ್ ಸಿಂಗ್ ಅವರಿಗೆ ಶುಭ ಹಾರೈಸಿ ದ್ದಾರೆ.
‘ಭಾರತದ ಅತ್ಯುತ್ತಮ ರಾಜನೀತಿಜ್ಞರಲ್ಲಿ ಒಬ್ಬರಾದ ಡಾ. ಮನಮೋಹನ್ ಸಿಂಗ್ ಅವರಿಗೆ ಜನ್ಮದಿನದ ಶುಭಾಶಯಗಳು. ಅವರು ನನಗೆ ಮತ್ತು ಇತರ ಕೋಟ್ಯಂತರ ಭಾರತೀಯರಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಉತ್ತಮ ಆರೋಗ್ಯ ಮತ್ತು ಸಂತೋಷಕ್ಕಾಗಿ ನಾನು ಪ್ರಾರ್ಥಿ ಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ.
ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಕೂಡ ಮನಮೋಹನ್ ಸಿಂಗ್ ಅವರಿಗೆ ಶುಭಾಶಯ ಕೋರಿದ್ದಾರೆ.
ಎರಡು ಅವಧಿಗೆ (2004-2014) ಪ್ರಧಾನಿಯಾಗಿದ್ದ ಡಾ. ಸಿಂಗ್ ಅವರು ಹೆಸರಾಂತ ಅರ್ಥಶಾಸ್ತ್ರಜ್ಞರಾಗಿದ್ದು, 1990 ರ ದಶಕದಲ್ಲಿ ವ್ಯಾಪಕವಾದ ಸುಧಾರಣೆಗಳನ್ನು ಪರಿಚಯಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.